No menu items!
32.4 C
Munich
Friday, August 14, 2026

ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು..! ಪುರಸಭೆ ಸದಸ್ಯನನ್ನು ಕೊಂದಿದ್ದ ರೌಡಿ ಶೀಟರ್‌ ಅರೆಸ್ಟ್‌

Must read

 

ಆನೇಕಲ್: ಆನೇಕಲ್ ತಾಲ್ಲೂಕಿನಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಹೌದು ಪುರಸಭೆ ಸದಸ್ಯನನ್ನು ಹತ್ಯೆ ಮಾಡಿದ್ದ ರೌಡಿ ಶೀಟರ್‌ʼನನ್ನು ಅರೆಸ್ಟ್‌ ಮಾಡಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಈತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿಯಾಗಿದ್ದಾನೆ.
ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ.

- Advertisement -spot_img

More articles

- Advertisement -spot_img

Latest article