ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಆಫ್ ಲೈನ್ ಮೂಲಕ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತರು ಜುಲೈ 5ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
Company secretary ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು. ಬೆಸ್ಕಾಂ ನೇಮಕಾತಿ ನಿಯಮಗಳ ಅನ್ವಯ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 61,420-103290 ರೂ. ವೇತನ ನಿಗದಿ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಕೆ ಮಾಡಬೇಕು.
ವಿಳಾಸ; ಭರ್ತಿ ಮಾಡಿದ ಅರ್ಜಿಗಳನ್ನು ಅಭ್ಯರ್ಥಿಗಳು General Manager (A&HR), BESCOM Corporate Office, KR Circle, Bangaluru 560001 ವಿಳಾಸಕ್ಕೆ ಜುಲೈ 5ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು bescom.org ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.