ಬೈಕಲ್ಲೇ ಸೋಂಕಿತನನ್ನು ಆಸ್ಪತ್ರೆಗೆ ಸಾಗಿಸಿದ್ರು!

Date:

ತಿರುವನಂತಪುರಂ: ಕೊರೊನಾ ಸೋಂಕಿತನೋರ್ವನನ್ನು ಯುವಕರಿಬ್ಬರು ಬೈಕ್‍ನಲ್ಲಿ ಆಸ್ಪತ್ರೆಗೆ ಸಾಗಿಸಿದ ವೀಡೀಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೇರಳದ ಪುನ್ನಾರ ಗ್ರಾಮದ ಯುವಕನೋರ್ವ ಕೊರೊನಾ ಸೋಂಕಿಗೆ ಒಳಗಾಗಿ ಅಲ್ಲಿನ ಪ್ರೈಮರಿ ಕೋವಿಡ್ ಕೇರ್ ಸೆಂಟರ್‍ನಲ್ಲಿ ದಾಖಲಾಗಿದ್ದರು. ಅಲ್ಲಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಯುವಕರಿಬ್ಬರು ಪಿಪಿಇ ಕಿಟ್ ಧರಿಸಿಕೊಂಡು ಬೈಕ್‍ನಲ್ಲಿ ನಗರದ ಆಸ್ಪತ್ರೆಗೆ ಸಾಗಿಸಿರುವ ವೀಡಿಯೋ ಒಂದು ವೈರಲ್ ಆಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬೈಕ್‍ನಲ್ಲಿ ಕರೆದುಕೊಂಡು ಹೋದ ಯುವಕ, ಸೋಂಕಿತ ಉಸಿರಾಡಲಾಗದೆ ಕಷ್ಟ ಪಡುತ್ತಿದ್ದರಿಂದಾಗಿ ನಾವು ಬೇರೆ ಆಸ್ಪತ್ರೆಗೆ ಆತನನ್ನು ಬೈಕ್‍ನಲ್ಲಿ ಸಾಗಿಸಿದ್ದೇವೆ. ಅಲ್ಲಿ ಆತನಿಗೆ ಆಕ್ಸಿಜನ್ ನೀಡಿದ ಬಳಿಕ ಸುಧಾರಿಸಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.

ವೀಡೀಯೊ ವೈರಲ್ ಆಗುತ್ತಿದ್ದಂತೆ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿರು ಜಿಲ್ಲಾ ಆರೋಗ್ಯ ಇಲಾಖೆ, ಪ್ರೈಮರಿ ಕೋವಿಡ್ ಕೇರ್ ಸೆಂಟರ್‍ ನಲ್ಲಿದ್ದ ವ್ಯಕ್ತಿಯನ್ನು ಆರೋಗ್ಯ ಇಲಾಖೆಗೆ ತಿಳಿಸದೆ ಬೈಕ್‍ನಲ್ಲಿ ಸಾಗಿಸಿರುವುದರಿಂದ ಸಾಗಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

 

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...