ಬೈಕ್ ಹರಿದು ಅವಘಡ: ಜಾತ್ರೆಗೆ ಹೋಗಿದ್ದ ಯುವಕರು ಮಸಣಕ್ಕೆ!

Date:

ಬೈಕ್ ಹರಿದು ಅವಘಡ: ಜಾತ್ರೆಗೆ ಹೋಗಿದ್ದ ಯುವಕರು ಮಸಣಕ್ಕೆ

ವಿಜಯಪುರ:- ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸಾವನ್ನಪ್ಪಿದ್ದು, ಜಾತ್ರೆಗೆ ಬಂದವರು ಮಸಣ ಸೇರುವಂತಾಗಿದೆೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ.

ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಪಾದಚಾರಿಗಳು ಹಾಗೂ ಬೈಕ್ ಸವಾರರಿಬ್ಬರು ಸೇರಿ ಒಟ್ಟು ನಾಲ್ವರು ಯುವಕರ ಮೃತಪಟ್ಟಿದ್ದಾರೆ.

ಮೂವರಿಗೆ ಗಂಭೀರ ಗಾಯಗಳಾಗಿವೆ. ನಿನ್ನೆ ರಾತ್ರಿ 11 ಗಂಟೆಗೆ ಘಟನೆ ನಡೆದಿದೆ. ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾನೆ. ಅನಿಲ ಖೈನೂರ , ಚೌಡಕಿ, ಕುಮಾರ ಪ್ಯಾಟಿ, ರಾಯಪ್ಪ ಬಾಗೇವಾಡಿ ಮೃತ ದುರ್ದೈವಿಗಳಾಗಿದ್ದಾರೆ.

ಶಾಹಿದ ಹುನಗುಂದ, ಪ್ರಶಾಂತ ಕುರುಬಗೌಡರ, ಹನಮಂತ ಕರುಬಗೌಡರಗೆ ಗಂಭಿರ ಗಾಯಗಳಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...