ಗೋಕಾಕ್ ನಲ್ಲಿರುವ ರಮೇಶ್ ಜಾರಕಿಹೊಳಿ ಅವರ ನಿವಾಸದ ಬಳಿ ಸಂಕಲ್ಪ ಸಮಾವೇಶ ನಡೆಯಲಿದೆ. 5 ಸಾವಿರಕ್ಕೂ ಹೆಚ್ಚು ಮಂದಿ ಬೆಂಬಲಿಗರು ಭಾಗಿಯಾಗಲಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಸಮಾವೇಶ ಹಮ್ಮಿಕೊಂಡಿದ್ದು. ರಮೇಶ್ ಅಳಿಯ ಅಂಬಿರಾವ್ ಪಾಟೀಲ್ ನೇತೃತ್ವದಲ್ಲಿ ತಯಾರಿ ನಡೆದಿದೆ ಎನ್ನಲಾಗಿದೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿರುವುದರಿಂದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಈಗಾಗಲೇ ಮಾಜಿ ಸಿಎಂ ಸಿದ್ಧರಾಮಯ್ಯ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ. ಲಖನ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಖಚಿತವಾಗಿದೆ