ಕನ್ನಡಿಗ ರಾಹುಲ್ ದ್ರಾವಿಡ್ ಇತ್ತೀಚಿಗಷ್ಟೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಟೀಮ್ ಇಂಡಿಯಾಕ್ಕೆ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ್ದರು. ಹೀಗೆ ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ರಾಹುಲ್ ದ್ರಾವಿಡ್ ಅವರಿಗೆ ಟೀಮ್ ಇಂಡಿಯಾದ ಪ್ರಮುಖ ತರಬೇತುದಾರನಾಗಿ ಅವಕಾಶ ನೀಡಬೇಕೆಂದು ಸಾಮಾಜಿಕ ಜಾಲತಾಣದ ತುಂಬಾ ದೊಡ್ಡ ಮಟ್ಟದಲ್ಲಿ ಬೇಡಿಕೆ ಎದುರಾಗಿತ್ತು.
ಹೀಗೆ ಶ್ರೀಲಂಕಾ ಸರಣಿಯ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ರಾಹುಲ್ ದ್ರಾವಿಡ್ ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಭಾರತದ ಬ್ರಿಟಿಷ್ ರಾಯಭಾರಿ ಅಲೆಕ್ಸ್ ಎಲ್ಲಿಸ್‌ಗೆ ಕನ್ನಡ ಕಲಿಸುವುದರ ಮೂಲಕ ರಾಹುಲ್ ದ್ರಾವಿಡ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಪಟ್ಟಿ ಸೇರಿದ್ದಾರೆ. ಭಾರತದ ಬ್ರಿಟಿಷ್ ರಾಯಭಾರಿ ಅಲೆಕ್ಸ್ ಎಲ್ಲಿಸ್ ಅವರು ಸದ್ಯ ದಕ್ಷಿಣ ಭಾರತದ ಪ್ರವಾಸದಲ್ಲಿದ್ದು ದಕ್ಷಿಣ ಭಾರತದ ವಿವಿಧ ನಗರಗಳಿಗೆ ಭೇಟಿ ನೀಡಿ ಇಲ್ಲಿನ ಸಂಸ್ಕೃತಿ ಮತ್ತು ಭಾಷೆಗಳನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನವನ್ನು ಮಾಡುತ್ತಿದ್ದಾರೆ.
ಹೀಗೆ ಭಾರತದ ದಂತಕತೆ ರಾಹುಲ್ ದ್ರಾವಿಡ್ ಅವರನ್ನು ಭೇಟಿಯಾದ ಭಾರತದ ಬ್ರಿಟಿಷ್ ರಾಯಭಾರಿ ಅಲೆಕ್ಸ್ ಎಲ್ಲಿಸ್ ಅವರು ರಾಹುಲ್ ದ್ರಾವಿಡ್ ಅವರ ಜೊತೆ ಮಾತನಾಡಿ ರಾಹುಲ್ ದ್ರಾವಿಡ್ ಅವರಿಂದ ಕನ್ನಡ ಪಾಠವನ್ನು ಮಾಡಿಸಿಕೊಂಡಿದ್ದಾರೆ. ಅಲೆಕ್ಸ್ ಎಲ್ಲಿಸ್ ಅವರನ್ನು ಭೇಟಿಯಾದ ರಾಹುಲ್ ದ್ರಾವಿಡ್ ಪ್ರೀತಿಯಿಂದಲೇ ಅವರನ್ನು ಮಾತನಾಡಿಸಿ ಅವರಿಗೆ ಕನ್ನಡದ ಕೆಲವೊಂದು ಪದಗಳನ್ನು ಹೇಳಿಕೊಟ್ಟಿದ್ದಾರೆ.
ಹೀಗೆ ರಾಹುಲ್ ದ್ರಾವಿಡ್ ಅವರಿಂದ ಕನ್ನಡ ಪಾಠವನ್ನು ಹೇಳಿಸಿಕೊಂಡಿರುವ ಭಾರತದ ಬ್ರಿಟಿಷ್ ರಾಯಭಾರಿ ಅಲೆಕ್ಸ್ ಎಲ್ಲಿಸ್ ಅವರ ಮತ್ತು ರಾಹುಲ್ ದ್ರಾವಿಡ್ ನಡುವಿನ ಕನ್ನಡ ಸಂಭಾಷಣೆಯ ವೀಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ.
Cricket expressions in Indian languages part 2.
Today, we’re down south in Bengaluru.
What better teacher than ‘The Coach’ #RahulDravid, who taught taught me this in #Kannada ಕನ್ನಡ ???? pic.twitter.com/tDCtHOcIwa
— Alex Ellis (@AlexWEllis) August 7, 2021
ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ದ್ರಾವಿಡ್ ಅವರನ್ನು ಭೇಟಿ ಮಾಡಿದ್ದಾಗಿನ ವಿಡಿಯೋವನ್ನು ಹಂಚಿಕೊಂಡಿರುವ ಅಲೆಕ್ಸ್ ಎಲ್ಲಿಸ್ ಕೋಚ್ ರಾಹುಲ್ ದ್ರಾವಿಡ್ ಅವರು ಕನ್ನಡ ಪಾಠ ಹೇಳಿಕೊಡುವುದಕ್ಕಿಂತ ಉತ್ತಮವಾದದ್ದು ಇನ್ನೇನಿದೆ ಎಂದು ಬರೆದುಕೊಳ್ಳುವುದರ ಮೂಲಕ ವಿಡಿಯೋವನ್ನು ಹಂಚಿಕೊಂಡಿದ್ದಾರೆ.