ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಎಲ್ಲಾ ಕಾಲೇಜುಗಳಿಗೆ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಆನ್‌ಲೈನ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಎರಡು ವಿಷಯಗಳಿಗೆ ಪರೀಕ್ಷೆ ನೀಡಲು ಸೂಚನೆ ನೀಡಲಾಗಿದೆ.
ಈ ಹಿಂದೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರು. ಆದರೆ ಇದೀಗ ಆನ್‌ಲೈನ್ ಪರೀಕ್ಷೆ ಕಡ್ಡಾಯ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುವುದಿಲ್ಲ. ಆದರೆ ಪ್ರಥಮ ಪಿಯುಸಿಗೆ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.
ಪಿಯು ಬೋರ್ಡ್, ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್‌ಸೈಟ್‌ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿರಲಿದೆ.