ಭಗತ್ ಸಿಂಗ್ ಅವತಾರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್..!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುರುಕ್ಷೇತ್ರದ ಸುಯೋಧನನ ಪಾತ್ರದಲ್ಲಿ ನಿಮ್ಮ ಮುಂದೆ ಬರಲು ತಯಾರಾಗಿದ್ದಾರೆ. ದಚ್ಚು ಅಭಿನಯದ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ರಿಲೀಸ್​ಗೆ ಅಭಿಮಾನಿಗಳು ವ್ಹೇಟ್ ಮಾಡುತ್ತಿದ್ದಾರೆ. ಈ ನಡುವೆ ಅವರು ಭಗತ್ ಸಿಂಗ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುದ್ದಿ ಮತ್ತೊಮ್ಮೆ ಸದ್ದು ಮಾಡುತ್ತಿದೆ.
ಸಂಗೊಳ್ಳಿ ರಾಯಣ್ಣ ಆಯ್ತು, ಈ ಸುಯೋಧನನ ಪಾತ್ರದಲ್ಲಿ ಕಾಣಿಸಿಕೊಂಡಿರುವ ದಚ್ಚು ಮತ್ತೆ ಅಪ್ರತಿಮ ದೇಶ ಭಕ್ತ ಭಗತ್ ಸಿಂಗ್ ಜೀವನಾಧಾರಿತ ಸಿನಿಮಾದಲ್ಲಿ ನಟಿಸುತ್ತಿದ್ದಾರಾ ಎಂಬ ಪ್ರಶ್ನೆ ನಿಮ್ಮ ತಲೆಯಲ್ಲಿ ಬಂದಿರಬಹುದು. ಆದರೆ. ದರ್ಶನ್ ಭಗತ್ ಸಿಂಗ್ ಗೆಟಪ್​ನಲ್ಲಿ ಕಾಣಿಸಿಕೊಂಡಿರುವುದು ಡೈನಾಮಿಕ್ ಪ್ರಿನ್ಸ್​ ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್​ಪೆಕ್ಟರ್ ವಿಕ್ರಂ ಸಿನಿಮಾದಲ್ಲಿ ದರ್ಶನ್ ಭಗತ್ ಸಿಂಗ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಭಾವನಾ ಮೆನನ್ ನಟಿಸಿದ್ದಾರೆ. ಇನ್ಸ್​ಪೆಕ್ಟರ್ ಆಗಿ ಪ್ರಜ್ವಲ್ ಕಾಣಿಸಿಕೊಂಡಿದ್ದು, ಖಾಕಿಗೆ ಖಳನಾಗಿ ರಮೇಶ್ ಅರವಿಂದ್ ನಟಿಸಿದ್ದಾರೆ..! ಈ ಎರಡು ಪಾತ್ರಗಳ ನಡುವೆ ನಿರ್ದೇಶಕ ನರಸಿಂಹ ಟ್ವಿಸ್ಟ್ ಕೊಡುವ ಪಾತ್ರ ತಂದಿದ್ದಾರೆ..! ಅದೇ ಸ್ವಾತಂತ್ರ್ಯ ಸೇನಾನಿ ಭಗತ್ ಸಿಂಗ್ ಪಾತ್ರ..! ಅದೇ ಡಿ.ಬಾಸ್ ಕಾಣಿಸಿಕೊಂಡಿರುವ ಪಾತ್ರ..!


ಇನ್ಸ್​ಪೆಕ್ಟರ್ ವಿಕ್ರಂ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಮತ್ತೆ ದರ್ಶನ್ ಭಗತ್ ಸಿಂಗ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಸುದ್ದಿಯಾಗುತ್ತಿದೆ. ದರ್ಶನ್ ಈ ಸಿನಿಮಾದಲ್ಲಿ ನಟಿಸಿರೋ ವಿಷಯ ಈ ಹಿಂದೆನೇ ವರದಿಯಾಗಿತ್ತು. ದಸರಾಕ್ಕೆ ಸಿನಿಮಾ ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ.
ದರ್ಶನ್ ಈ ವರ್ಷ ಯಜಮಾನನಾಗಿ ಮಿಂಚಿದ್ದಾರೆ, ಕುರುಕ್ಷೇತ್ರ ರಿಲೀಸ್ ಗೆ ರೆಡಿಯಾಗಿದೆ. ರಾಬರ್ಟ್, ಒಡೆಯ ಹೀಗೆ ಸಾಲು ಸಾಲು ಸಿನಿಮಾಗಳೂ ಇವೆ. ಅವುಗಳ ನಡುವೆ ಇನ್ಸ್ಪೆಕ್ಟರ್ ವಿಕ್ರಂನಲ್ಲಿ ಅತಿಥಿ ಪಾತ್ರದಲ್ಲಿ ನಿಮ್ಮ ಮುಂದೆ ಬರಲಿದ್ದಾರೆ.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...