ಸುದ್ದಿಗಾರರ ಜೊತೆ ಮಾತನಾಡಿದ ಅವರು ನಮ್ಮ ಪ್ರತಿಭಟನೆ ಮುಂದುವರೆಯುತ್ತದೆ, ಭಾನುವಾರ ಸಿಎಂ ಕುಮಾರಸ್ವಾಮಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ, ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡುವುದನ್ನು ಮುಂದುವರೆಸಿದೆ ಎಂದು ಎಂದು ಆರೋಪಿಸಿದರು.
ಸಿಎಂ ಜಿಂದಾಲ್ ಬಗ್ಗೆ ಚರ್ಚೆ ನಡೆಸಲು ಸಭೆ ಕರೆದಿದ್ದಾರೆ., ಆದರೆ ಈ ಸಭೆಯಲ್ಲಿ ಜಿಂದಾಲ್ ಕಂಪನಿಗೆ ಭೂಮಿ ನೀಡುವ ವಿಚಾರವನ್ನು ಜೀವಂತವಾಗಿಡುವ ಕೆಲಸ ನಡೆದಿದೆ.ಐಎಂಎ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿ ಗೆ ನೀಡಿ ಮುಚ್ಚಿ ಹಾಕಲು ಮುಂದಾಗಿದೆ. ಈ ಪ್ರಕರಣವನ್ನು ಸಿಬಿಐ ಅಥವಾ ಸಿಐಡಿಗೆ ನೀಡಬೇಕು. ಜಮೀರ್ ಹಾಗೂ ರೋಷನ್ ಬೇಗ್ ಮಾತ್ರ ಈ ಪ್ರಕರಣದಲ್ಲಿ ಇಲ್ಲಾ..ಇನ್ನೂ ಅನೇಕ ನಾಯಕರಿದ್ದಾರೆ ಎಂದು ಆರೋಪಿಸಿದರು.