ಒಲಿಂಪಿಕ್ಸ್’ ಅಖಾಡದಲ್ಲಿ ಭಾರತ ಮತ್ತೊಮ್ಮೆ ಜಗತ್ತಿನ ಗಮನ ಸೆಳೆದಿದೆ. ಅದ್ರಲ್ಲೂ ಜಾವೆಲಿನ್ ಥ್ರೋ ವಿಭಾಗದಲ್ಲಿ ಶತಕೋಟಿ ಭಾರತೀಯರ ನಿರೀಕ್ಷೆ ಕಾಪಾಡಿಕೊಂಡು ಬಂದಿದ್ದ ‘ಚಿನ್ನ’ದ ಹುಡುಗ ನೀರಜ್ ಚೋಪ್ರಾ ಭರ್ಜರಿಯಾಗಿ ಬೆಳ್ಳಿಯ ಪದಕ ಗೆದ್ದಿದ್ದಾರೆ.
ಕ್ರಿಕೆಟ್ ಮಾತ್ರವಲ್ಲದೆ, ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾರತ ಮತ್ತು ಪಾಕಿಸ್ತಾನದ ಹೋರಾಟ ಭಾರೀ ಕುತೂಹಲ ಮೂಡಿಸಿತ್ತು. ಆದರೆ ಈ ಬಾರಿ ಭಾರತದ ಮೇಲೆ ಪಾಕಿಸ್ತಾನ ಮೇಲುಗೈ ಸಾಧಿಸಿದೆ. ಗುರುವಾರ ತಡರಾತ್ರಿ ನಡೆದ ಪುರುಷರ ಜಾವೆಲಿನ್ ಥ್ರೋವರ್ ಫೈನಲ್‌ನಲ್ಲಿ ಪಾಕಿಸ್ತಾನ ಚಿನ್ನಕ್ಕೆ ಮುತ್ತಿಟ್ಟಿದೆ.
ಇತ್ತ ತೀವ್ರ ಕುತೂಹಲ, ನಿರೀಕ್ಷೆಗಳಿದ್ದ ಒಲಿಂಪಿಕ್ಸ್ 2024 ರ ಜಾವೆಲಿನ್ ಥ್ರೋ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದಾರೆ. ನೀರಜ್ ಅವರು ಮೊದಲ ಪ್ರಯತ್ನದಲ್ಲಿ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಕಾಲು ಗೆರೆ ತಾಗಿದ್ದರ ಪರಿಣಾಮ ಫೌಲ್ ಆಗಿ ವಿಫಲರಾಗಿದ್ದರು. ಆದರೆ 2ನೇ ಪ್ರಯತ್ನದಲ್ಲಿ 89.45 ಮೀಟರ್ ಗಳಿಗೆ ಭರ್ಜಿ ಎಸೆದಿದ್ದರು. 3ನೇ ಪ್ರಯತ್ನದಲ್ಲಿ ಮತ್ತೆ ಫೌಲ್ ಆಗಿದ್ದರು.ಪಾಕಿಸ್ತಾನದ ಅರ್ಶದ್ ನದೀಮ್ ಮೊದಲ ಪ್ರಯತ್ನದಲ್ಲೇ 92.97 ಮೀಟರ್ ಭರ್ಜಿ ಎಸೆದು ಒಲಿಂಪಿಕ್ಸ್ ದಾಖಲೆಯನ್ನು ಮುರಿದು ಚಿನ್ನದ ಪದಕ ತಮ್ಮದಾಗಿಸಿಕೊಂಡರು.
ಬಳಿಕ ಮಾತನಾಡಿದ ನೀರಜ್ ಜೋಪ್ರಾ, ಪ್ರತಿಯೊಬ್ಬ ಕ್ರೀಡಾಪಟುಗಳು ತಮ್ಮ ದಿನವನ್ನು ಹೊಂದಿರುತ್ತಾರೆ. ಇಂದು ಅರ್ಷದ್ ಅವರ ದಿನವಾಗಿತ್ತು. ನಮ್ಮ ರಾಷ್ಟ್ರಗೀತೆಯನ್ನು ಇಂದು ನುಡಿಸದೇ ಇರಬಹುದು, ಆದರೆ ಭವಿಷ್ಯದಲ್ಲಿ ಬೇರೆಡೆ ಖಂಡಿತವಾಗಿಯೂ ನುಡಿಸಲಾಗುವುದು ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಂದಹಾಗೇ, 32 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಅರ್ಶದ್ ನದೀಮ್ ಚಿನ್ನದ ಪದಕ ತಂದು ಕೊಟ್ಟಿದ್ದಾರೆ. ಹರ್ಷದ್ ನದೀಮ್ ಅವರು ದಾಖಲೆಯ 92.97 ಮೀಟರ್ ದೂರದಲ್ಲಿ ಜಾವೆಲಿನ್ ಎಸೆದು ಸಾರ್ವಕಾಲಿಕ ಒಲಿಂಪಿಕ್ ದಾಖಲೆ ನಿರ್ಮಿಸಿದ್ದಾರೆ.