ಭಾರತದ ಕುಸ್ತಿಪಟು ಭಜರಂಗ್ ಪೂನಿಯಾ ಪ್ರಸ್ತುತ ನಡೆಯುತ್ತಿರುವ ಟೋಕಿಯೊ ಒಲಿಂಪಿಕ್ಸ್‌ನ ಕಂಚಿನ ಸುತ್ತಿನ ಪಂದ್ಯದಲ್ಲಿ ಕಂಚಿನ ಪದಕವನ್ನು ಗೆಲ್ಲುವ ಮೂಲಕ ಭಾರತಕ್ಕೆ ಆರನೇ ಪದಕವನ್ನು ತಂದು ಕೊಟ್ಟಿದ್ದಾರೆ.
ಕಂಚಿನ ಪದಕದ ಸುತ್ತಿನಲ್ಲಿ ಕಜಕಿಸ್ತಾನದ ಕ್ರೀಡಾಪಟುವನ್ನು ಸೋಲಿಸಿ ಕಂಚಿನ ಪದಕವನ್ನು ಬಜರಂಗ್ ಪೂನಿಯಾ ತಮ್ಮದಾಗಿಸಿಕೊಂಡಿದ್ದಾರೆ. ಪ್ರಿ ಕ್ವಾರ್ಟರ್ ಫೈನಲ್ ಮತ್ತು ಕ್ವಾರ್ಟರ್ ಫೈನಲ್ ಪಂದ್ಯಗಳಲ್ಲಿ ಜಯಗಳಿಸಿ ಸೆಮಿಫೈನಲ್ ಹಂತವನ್ನು ತಲುಪಿದ್ದ ಭಜರಂಗ್ ಪೂನಿಯಾ ಸೆಮಿಫೈನಲ್ ಪಂದ್ಯದಲ್ಲಿ ಎಡವಿ ಫೈನಲ್ ಪ್ರವೇಶಿಸುವ ಅವಕಾಶವನ್ನು ತಪ್ಪಿಸಿಕೊಂಡಿತು.
ಹೀಗಾಗಿ ಕಂಚಿನ ಪದಕದ ಸುತ್ತಿನಲ್ಲಿ ಆಡುವ ಅನಿವಾರ್ಯತೆ ಭಜರಂಗ್ ಪೂನಿಯಾ ಗೆ ಎದುರಾಯಿತು. ಕಂಚಿನ ಪದಕದ ಸುತ್ತಿನಲ್ಲಿ ಕಜಕಿಸ್ತಾನದ ಕ್ರೀಡಾಪಟುವನ್ನು 8-0 ಅಂತರದಲ್ಲಿ ಮಣಿಸುವುದರ ಮೂಲಕ ಬಜರಂಗ್ ಪೂನಿಯಾ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದು ಇದೀಗ ಸಾಮಾಜಿಕ ಜಾಲತಾಣದ ತುಂಬಾ ಬಜರಂಗ್ ಪೂನಿಯಾಗೆ ಪ್ರಶಂಸೆಯ ಸುರಿಮಳೆ ಸುರಿಯುತ್ತಿದೆ.