ನಾಳೆಯಿಂದ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ 5ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು ಎಲ್ಲೆಡೆ ಭಾರೀ ಕುತೂಹಲ ಹೆಚ್ಚಾಗಿದೆ. ಎರಡೂ ತಂಡಗಳಿಗೂ ಅತಿಮುಖ್ಯವಾದ ಟೆಸ್ಟ್ ಸರಣಿ ಇದಾಗಿದ್ದು ಯಾವ ತಂಡ ಸರಣಿಯನ್ನು ಕೈವಶ ಮಾಡಿಕೊಳ್ಳಲಿದೆ ಎಂಬುದರ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.
ಈ ಕುರಿತು ಇದೀಗ ಭಾರತದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಮಾತನಾಡಿದ್ದು ಯಾವ ತಂಡ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಭಾರತ ತಂಡ ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳನ್ನು ಗೆಲ್ಲುವುದರ ಮೂಲಕ ಸರಣಿಯನ್ನು ಕೈವಶ ಮಾಡಿಕೊಳ್ಳಲಿದೆ, ಬೆನ್ ಸ್ಟೋಕ್ಸ್ ಇಲ್ಲದ ಕಾರಣ ಇಂಗ್ಲೆಂಡ್ ಕಳಪೆ ಪ್ರದರ್ಶನ ನೀಡಿ ಒತ್ತಡಕ್ಕೆ ಸಿಲುಕಲಿದೆ ಎಂದು ಹರ್ಭಜನ್ ಸಿಂಗ್ ಭವಿಷ್ಯವನ್ನು ನುಡಿದಿದ್ದಾರೆ.