ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಡೊನಾಲ್ಡ್ ಟ್ರಂಪ್

Date:

ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಡೊನಾಲ್ಡ್ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ’ ಎಂದು ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಡೊನಾಲ್ಡ್‌ ಟ್ರಂಪ್‌, ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಸುದೀರ್ಘ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ
ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿಮತ್ತೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ಯಾವಾಗಲೂ ಶ್ರಮಿಸುತ್ತಿದೆ ಎಂಬ ಟ್ರಂಪ್ ಹೇಳಿಕೆಯನ್ನು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಕೂಡ ಅನುಮೋದಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...