ಭಾರಿ ಮಳೆಗೆ ಮುಂಬೈ ಜನಜೀವನ ಅಸ್ತವ್ಯಸ್ತ!

Date:

ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮುಂಬೈ ಮತ್ತು ಪುಣೆಯಲ್ಲಿ ಗೋಡೆ ಕುಸಿದು ಇದುವರೆಗೆ 43 ಮಂದಿ ಸಾವನ್ನಪ್ಪಿದ್ದಾರೆ ಮತ್ತು 80 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗೋಡೆ ಕುಸಿತದಿಂದಾಗಿ ಮುಂಬೈನಲ್ಲಿ 22 ಮಂದಿ ಹಾಗೂ ಪುಣೆಯಲ್ಲಿ 21 ಮಂದಿ ಮೃತಪಟ್ಟಿದ್ದಾರೆ.

ಭಾರಿ ಮಳೆಯಿಂದಾಗಿ ರಸ್ತೆಗಳು ಮತ್ತು ರೈಲು ಹಳಿಗಳಲ್ಲಿ ನೀರು ತುಂಬಿಕೊಂಡಿದ್ದು, ರಸ್ತೆ, ರೈಲು ಸಂಚಾರಕ್ಕೆ ಅಡ್ಡಿಯಾಗಿದೆ. ಈ ಹಿನ್ನೆಲೆ ಇಂದು ಸಾರ್ವಜನಿಕ ರಜಾ ಘೋಷಣೆಯಾಗಿದೆ.
ಮುಂಜಾನೆ 2 ಗಂಟೆ ಸುಮಾರಿಗೆ ಮಲಾಡ್ ಪೂರ್ವದ ಪಿಂಪ್ರಿಪಾಡಾ ಪ್ರದೇಶದಲ್ಲಿ ಕಾಂಪೌಂಡ್ ಗೋಡೆ ಕುಸಿದಿದ್ದು, ಗೋಡೆಯ ಪಕ್ಕದ ಗುಡಿಸಲುಗಳಲ್ಲಿ ವಾಸಿಸುವ ಜನರು ಭಗ್ನಾವಶೇಷದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಎನ್‌ಡಿಆರ್‌ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಗೋಡೆ ಕುಸಿದ ಘಟನೆಯಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ.
ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರ ತಂಡವೂ ಸ್ಥಳಕ್ಕೆ ತಲುಪಿ ಪರಿಸ್ಥಿತಿಯನ್ನು ನಿಯಂತ್ರಿಸಿದೆ ಎಂದು ಎನ್‌ಡಿಆರ್‌ಎಫ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗೋಡೆ ಕುಸಿತದಲ್ಲಿ ಗಾಯಗೊಂಡ 34 ಜನರನ್ನು ಜೋಗೇಶ್ವರಿ ತುರ್ತು ಚಿಕಿತ್ಸಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...