No menu items!
13.7 C
Munich
Sunday, September 13, 2026

ಭೀಕರ ಅಪಘಾತ: ಕಾರು ಮರಕ್ಕೆ ಡಿಕ್ಕಿ – ಇಬ್ಬರು ಸಾವು

Must read

ಭೀಕರ ಅಪಘಾತ: ಕಾರು ಮರಕ್ಕೆ ಡಿಕ್ಕಿ – ಇಬ್ಬರು ಸಾವು

ಕಾರವಾರ: ಅತಿವೇಗದಲ್ಲಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್ ಸಮೀಪದ ಅಜಗಾಂವ ಬಳಿ ನಡೆದಿದೆ.ಅಪಘಾತದಲ್ಲಿ ಧಾರವಾಡ ಮೂಲದ ಫಾರೂಖ್ ಸಾಬ್ ಹಾಗೂ ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತಪಟ್ಟ ದುರ್ದೈವಿಗಳು ಎಂದು ತಿಳಿದುಬಂದಿದೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ದಾಂಡೇಲಿಯಿಂದ ಹಳಿಯಾಳ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದೆ.ಈ ಕುರಿತು ದಾಂಡೇಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -spot_img

More articles

- Advertisement -spot_img

Latest article