ಕೊಪ್ಪಳ:- ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮರ್ಲಾನಹಳ್ಳಿ ಗ್ರಾಮದ ಬಳಿ ಜರುಗಿದೆ.
ಮೃತ ವ್ಯಕ್ತಿಯನ್ನು ಮಂಜುನಾಥ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಖಾಸಿಂ ಸಾಬ್ ಎಂದು ಗುರುತಿಸಲಾಗಿದೆ. ಮರ್ಲಾನಹಳ್ಳಿ ಗ್ರಾಮದ ಬಳಿ ಮೃತ ಸಿದ್ದಾಪುರ ಹಾಗೂ ಖಾಸಿಂ ಸಾಬ್ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಸರ್ಕಾರಿ ಬಸ್ ಚಾಲಕ ಎದುರಿಗಿದ್ದ ಕಾರನ್ನು ಓವರ್‌ಟೆಕ್ ಮಾಡಲು ಹೋಗಿ, ಎದುರಿಗಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಕಾರಟಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾರಿಗೆ ಬಸ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ.