No menu items!
5.3 C
Munich
Wednesday, September 23, 2026

ಭೀಕರ ರಸ್ತೆ ಅಪಘಾತ: ಲಾರಿ–ದ್ವಿಚಕ್ರ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Must read

ಭೀಕರ ರಸ್ತೆ ಅಪಘಾತ: ಲಾರಿ–ದ್ವಿಚಕ್ರ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಹಾಗೂ ಚಿಂತಾಮಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಹೊಸಕೋಟೆ ತಾಲೂಕಿನ ಮಲ್ಲಮ್ಮಕ್ಕನಪುರ ಗೇಟ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಬೈಕ್ ನಜ್ಜುಗುಜ್ಜಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಆಂಧ್ರ ಪ್ರದೇಶ ಮೂಲದವರಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಅವರ ಸಂಪೂರ್ಣ ವಿವರಗಳನ್ನು ಸಂಗ್ರಹಿಸುವ ಕಾರ್ಯವನ್ನು ಪೊಲೀಸರು ಮುಂದುವರೆಸಿದ್ದಾರೆ.
ಘಟನೆ ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

- Advertisement -spot_img

More articles

- Advertisement -spot_img

Latest article