ಭುವನೇಶ್ವರ್ ಕುಮಾರ್ ತಂದೆ ವಿಧಿವಶ

Date:

ಭಾರತದ ಖ್ಯಾತ ವೇಗಿ ಭುವನೇಶ್ವರ್ ಕುಮಾರ್ ತಂದೆ ಕಿರಣ್ ಪಾಲ್ ಸಿಂಗ್ (63) ಗುರುವಾರ ಕ್ಯಾನ್ಸರ್‌ನಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ತೀವ್ರ ಆನಾರೋಗ್ಯಕ್ಕೆ ಒಳಗಾಗಿದ್ದ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ದೆಹಲಿಯ ಏಮ್ಸ್ ನಂತರ ಹಲವಾರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಸಹ ಕಿರಣ್ ಪಾಲ್ ಸಿಂಗ್ ಆರೋಗ್ಯ ಸರಿಯಾದ ಸ್ಥಿತಿಗೆ ಬರಲಿಲ್ಲ ಹೀಗಾಗಿ ಮನೆಯಲ್ಲಿಯೇ ಔಷಧಿ ಪಡೆದುಕೊಂಡು ವಿಶ್ರಾಂತಿ ಪಡೆಯುತ್ತಿದ್ದ ಅವರು ಗುರುವಾರ ಅಸುನೀಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಭುವನೇಶ್ವರ್ ಕುಮಾರ್ ತಂದೆ ಕಿರಣ್ ಪಾಲ್ ಸಿಂಗ್ ಸ್ವಲ್ಪ ದಿನಗಳ ಮುಂಚೆ ಸ್ವಯಂ ನಿವೃತ್ತಿ ಪಡೆದಿದ್ದರು.

ಭುವನೇಶ್ವರ್ ಕುಮಾರ್ ಕೂಡ ತಂದೆ ಮತ್ತು ಕುಟುಂಬದವರನ್ನು ಹತ್ತಿರದಿಂದಲೇ ಇದ್ದು ನೋಡಿಕೊಳ್ಳುತ್ತಿದ್ದರು. ಲಿವರ್ ಸಂಬಂಧಿಸಿದ ಕ್ಯಾನ್ಸರ್‌ನಿಂದ ಭುವನೇಶ್ವರ್ ಕುಮಾರ್ ತಂದೆ ಮೃತಪಟ್ಟಿರುವುದು ತಂದೆಯ ಮೇಲೆ ತುಂಬಾ ಕಾಳಜಿಯನ್ನು ಇಟ್ಟುಕೊಂಡಿದ್ದ ಭುವನೇಶ್ವರ್ ಕುಮಾರ್‌‌ಗೆ ತೀವ್ರ ನೋವನ್ನುಂಟುಮಾಡಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...