No menu items!
31.6 C
Munich
Sunday, June 21, 2026

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆರೋಗ್ಯದಲ್ಲಿ ಸಮಸ್ಯೆ !

Must read

ಇಸ್ಲಾಮಾಬಾದ್: ಮುಂಬೈ ಸರಣಿ ಸ್ಫೋಟದ ರೂವಾರಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.

ಸದ್ಯ ಪ್ರಾಥಮಿಕ ಮಾಹಿತಿ ಪ್ರಕಾರ ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಇನ್ನೂ ಸ್ಪಷ್ಟವಾಗಿಲ್ಲ. ಕಳೆದ ಎರಡು ದಿನಗಳಿಂದಲೂ ಇಬ್ರಾಹಿಂ ಆಸ್ಪತ್ರೆಯಲ್ಲಿರುವುದಾಗಿ ತಿಳಿದುಬಂದಿದೆ.
ದಾವೂದ್‌ ಇಬ್ರಾಹಿಂ ದಾಖಲಾಗಿರುವ ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಆಸ್ಪತ್ರೆಯ ಉನ್ನತ ಅಧಿಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಮಾತ್ರವೇ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಇಬ್ರಾಹಿಂ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ಮುಂಬೈ ಪೊಲೀಸರು ಪಾತಕಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲು ಪ್ರಯತ್ನಿಸುತ್ತಿದ್ದಾರೆ.

ಈ ವರ್ಷದ ಜನವರಿ ತಿಂಗಳಲ್ಲಿ ದಾವೂದ್‌ ಸಹೋದರಿ ಹಸೀನಾ ಪಾರ್ಕರ್‌ನ ಮಗ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹೇಳಿಕೆ ನೀಡಿದ್ದು, ಇಬ್ರಾಹಿಂ 2ನೇ ಮದುವೆಯಾಗಿ ಕರಾಚಿಯಲ್ಲೇ ನೆಲೆಸಿರುವುದಾಗಿ ತಿಳಿಸಿದ್ದ. ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಪಾಕ್ ಭದ್ರತಾ ಪಡೆಗಳ ನೆರಳಿನಲ್ಲಿ ಆಶ್ರಯ ಪಡೆದಿದ್ದಾನೆ ಎನ್ನಲಾಗಿದೆ.

- Advertisement -spot_img

More articles

- Advertisement -spot_img

Latest article