No menu items!
12.5 C
Munich
Thursday, May 21, 2026

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

Must read

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ.
ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದರು.

- Advertisement -spot_img

More articles

- Advertisement -spot_img

Latest article