ಭ್ರಷ್ಟ ಸರ್ಕಾರ‌ ಕಿತ್ತೋಗೆಯಲು ಪಾದಯಾತ್ರೆ ಮಾಡ್ತಾ ಇದ್ದೀವಿ: ಯಡಿಯೂರಪ್ಪ

Date:

 

ಮೈಸೂರು: ಭ್ರಷ್ಟ ಸರ್ಕಾರ‌ ಕಿತ್ತೋಗೆಯಲು ಪಾದಯಾತ್ರೆ ಮಾಡ್ತಾ ಇದ್ದೀವಿ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ನಾಳೆ ಮೂರು ಲಕ್ಷಕ್ಕೂ ಅಧಿಕ ಜನ ನಮ್ಮ ಬೃಹತ್ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಪಾದಯಾತ್ರೆಗೆ ಜನರಿಂದ‌ ಉತ್ತಮ ಪ್ರತಿಕ್ರಿಯೆ ಸಿಕ್ತಾ ಇದೆ. ಭ್ರಷ್ಟ ಸರ್ಕಾರ‌ ಕಿತ್ತೋಗೆಯಲು ಪಾದಯಾತ್ರೆ ಮಾಡ್ತಾ ಇದ್ದೀವಿ. ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು. ಇದೇ ವೇಳೆ ಯಡಿಯೂರಪ್ಪ ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಎಸ್ವೈ,
ಸಿದ್ದರಾಮಯ್ಯ ಅವರು ಹೇಳಬೇಕು ಪಾಪ. ಅವರು ನಿವೃತ್ತಿ ತಗೊಂಡು ಮನೆಗೆ ಹೋಗುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಯಾರು ನಿವೃತ್ತಿಯಾಗ್ತಾರೆ, ಏನ್ ಆಗ್ತಾರೆ ಅನ್ನೊದು ಮುಂದೆ ಗೊತ್ತಾಗುತ್ತದೆ. ಪೊಕ್ಸೋ ಕೇಸ್‌ನಲ್ಲಿ ನಾಳೆ ಕೋರ್ಟ್‌ನಲ್ಲಿ ತೀರ್ಮಾನ ಆದಾಗ ಎಲ್ಲಾ ಬಹಿರಂಗವಾಗುತ್ತೆ. ಅಲ್ಲಿಯವರೆಗೆ ನಾನು ಏನು ಮಾತಾಡಲ್ಲ. ಅದಾದ ಬಳಿಕ ಸಿದ್ದರಾಮಯ್ಯಗೆ ಉತ್ತರ ಸಿಗುತ್ತೆ. ಅವರು ಈಗ ಮನಬಂದಂತೆ ಮಾತಾಡುತ್ತಿದ್ದಾರೆ ಮಾತಾಡಲಿ. ಹತಾಶೆಯ ಮನೋಭಾವದಲ್ಲಿ ಇರೋದನ್ನು ಜನರೇ ತೀರ್ಮಾನ ಮಾಡ್ತಾರೆ ಎಂದರು.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...