No menu items!
5.3 C
Munich
Wednesday, September 23, 2026

ಮಂಗನ ಕಾಯಿಲೆಗೆ 5 ವರ್ಷದ ಬಾಲಕಿ ಬಲಿ!

Must read

ಕಾರವಾರ: ಜಿಲ್ಲೆಯ ಸಿದ್ದಾಪುರ ತಾಲೂಕಿನ ಅರೆಂದೂರಿನಲ್ಲಿ 5 ವರ್ಷದ ಹೆಣ್ಣುಮಗು ಮಂಗನಕಾಯಿಲೆಯಿಂದ ಬಹು ಅಂಗಾಂಗ ವೈಫಲ್ಯದಿಂದ ಸಾವು ಕಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಒಂಬತ್ತು ಜನ ಸಾವು ಕಂಡಿದ್ದಾರೆ. ಕೆಲವು ದಿನದಿಂದ ಜ್ವರದಿಂದ ನರಳುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಹೆಣ್ಣುಮಗು ಅಸುನೀಗಿದೆ. ಸಿದ್ದಾಪುರ ತಾಲೂಕಿನೊಂದರಲ್ಲೇ 90 ಮಂಗನಕಾಯಿಲೆ ಪ್ರಕರಣ ಪತ್ತೆಯಾದರೇ ಇತರೆ ತಾಲೂಕುಗಳು ಸೇರಿ ಒಟ್ಟು 99 ಪ್ರಕರಣಗಳು ಈವರೆಗೆ ಪತ್ತೆಯಾಗಿವೆ.

- Advertisement -spot_img

More articles

- Advertisement -spot_img

Latest article