ಮಂಗಳೂರಿನಲ್ಲಿ ಅಫ್ಘಾನ್ ಪ್ರಜೆಗಳ ಕಷ್ಟ!

Date:

ಜಗತ್ತಿನ ಕಣ್ಣು ಸದ್ಯ ಅಫ್ಘಾನಿಸ್ತಾನದತ್ತ ನೆಟ್ಟಿದೆ. ಅಫ್ಘಾನಿಸ್ತಾನದಲ್ಲಿ ಪ್ರತಿಕ್ಷಣ ಏನಾಗುತ್ತಿದೆ ಅಂತಾ ಪ್ರತಿಯೊಬ್ಬರು ಗಮನಿಸುತ್ತಿದ್ದಾರೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆಯುತ್ತಿದ್ದು, ತಾಲಿಬಾನಿಗಳ ಕೈ ಸಿಕ್ಕ ಅಫ್ಘನ್ನರು ನರಳಾಡುತ್ತಿದ್ದಾರೆ. ಇನ್ನುಳಿದವರು ಬದುಕುಳಿದರೆ ಭಿಕ್ಷೆ ಬೇಡಿಯಾದರೂ ಜೀವನ ಮಾಡುತ್ತೇವೆ ಅಂತಾ ರಾತ್ರೋರಾತ್ರಿ ದೇಶ ಬಿಟ್ಟು ಪರಾರಿಯಾಗುತ್ತಿದ್ದಾರೆ.

 

ಅಫ್ಘಾನ್‌ನಲ್ಲಿ ಸಿಲುಕಿರುವ ವಿವಿಧ ರಾಷ್ಟ್ರಗಳ ಪ್ರಜೆಗಳನ್ನು ಆಯಾ ದೇಶ ರಕ್ಷಣೆ ಮಾಡುತ್ತಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ರಕ್ಷಣೆ ಮಾಡುವ ಕೆಲಸವನ್ನು ಭಾರತ ಸರ್ಕಾರ ಮತ್ತು ಭಾರತೀಯ ವಾಯುಸೇನೆ ಮಾಡುತ್ತಿದೆ. ಅಫ್ಘಾನಿಸ್ತಾನದಲ್ಲಿ ನೆಲೆಸಿರುವ ಭಾರತೀಯರ ಬಗ್ಗೆ ಭಾರತದಲ್ಲಿರುವ ಕುಟುಂಬಗಳು ಆತಂಕದಲ್ಲಿದ್ದರೆ, ಇತ್ತ ಭಾರತದಲ್ಲಿ ನೆಲೆಸಿರುವ ಅಫ್ಘಾನಿಸ್ತಾನದ ಕುಟುಂಬಗಳಿಗೆ ತಮ್ಮ ದೇಶದಲ್ಲಿ ಆಗುತ್ತಿರುವ ರಾಕ್ಷಸರ ಆಡಳಿತದ ಬಗ್ಗೆಯೇ ಚಿಂತೆ ಕಾಡಲಾರಂಭಿಸಿದೆ.

 

ಅಫ್ಘಾನ್‌ನಲ್ಲಿ ತಾಲಿಬಾನ್‌ಗಳ ಅಟ್ಟಹಾಸಕ್ಕೆ ಮಂಗಳೂರಿನಲ್ಲಿ ನೆಲೆಸಿರುವ ಅಫ್ಘಾನಿಗರು ಆತಂಕಕ್ಕೆ ಒಳಗಾಗಿದ್ದಾರೆ. ತಮ್ಮ ಕುಟುಂಬಿಕರ ಬಗ್ಗೆ ಹಾಗೂ ದೇಶದ ಬಗೆಗಿನ ಆತಂಕದಿಂದ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್‌. ಶಶಿಕುಮಾರ್ ರನ್ನು ಭೇಟಿಯಾಗಿದ್ದಾರೆ. ತಮಗಾಗಿರುವ ತೊಂದರೆಗಳನ್ನು ಪರಿಹರಿಸುವಂತೆ ಮನವಿಯನ್ನು ಮಾಡಿಕೊಂಡಿದ್ದಾರೆ.

ಕಡಲ ನಗರಿ ಮಂಗಳೂರಿನಲ್ಲಿ 58 ಜನ ಅಫ್ಘಾನ್ ಪ್ರಜೆಗಳು ನೆಲೆಸಿದ್ದಾರೆ. ಹೆಚ್ಚಿನ ಮಂದಿ ಸ್ನಾತಕ, ಸ್ನಾತಕೋತ್ತರ, ಪಿಎಚ್‌ಡಿ ಪದವಿಗಾಗಿ ಬಂದಿರುವ ವಿದ್ಯಾರ್ಥಿಗಳೇ ಹೆಚ್ಚು. ಸದ್ಯ ಅಫ್ಘಾನ್ ಪರಿಸ್ಥಿತಿ ಬಗ್ಗೆ ಕಳವಳಗೊಂಡಿರುವ ಅಲ್ಲಿನ ಪ್ರಜೆಗಳು ಮಂಗಳೂರು ನಗರ ಪೊಲೀಸ್ ಕಮೀಷನರ್ ಕಚೇರಿಗೆ ಭೇಟಿ ನೀಡಿದ್ದಾರೆ.

ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್‌ರನ್ನು ಭೇಟಿಯಾಗಿ ತಾಲಿಬಾನ್‌ಗಳು ಅಫ್ಘಾನ್‌ಗೆ ಲಗ್ಗೆಯಿಟ್ಟಿರಿರುವುದರಿಂದ ತಮಗಾಗಿರುವ ಪರಿಣಾಮಗಳ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಧೈರ್ಯ ತುಂಬಿದ ಕಮೀಷನರ್, ಸಮಸ್ಯೆಗಳನ್ನು ಬಗೆಹರಿಸುವಾಗಿ ಭರವಸೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...