ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

By
0 Min Read

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಏ.29 ರಂದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಉಗ್ರರ ಹೆಸರಿನಲ್ಲಿ ಇಮೇಲ್ ಬಂದಿದೆ. ಈ ಹಿನ್ನೆಲೆ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮತ್ತೊಂದೆಡೆ, ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸಂಪೂರ್ಣ ತಪಾಸಣೆ ಮಾಡಲಾಗಿದೆ. ಬಾಂಬ್ ಬೆದರಿಕೆ ಬಂದಿರುವುದನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಖಚಿತಪಡಿಸಿದ್ದಾರೆ.

Share This Article