No menu items!
16.8 C
Munich
Friday, August 21, 2026

ಮಂಡ್ಯಕ್ಕೆ ಕುಮಾರಸ್ವಾಮಿ ಅವರ ಹೆಸರೇ ಅಧಿಕೃತ ಆಗಿದೆ: ನಿಖಿಲ್ ಕುಮಾರಸ್ವಾಮಿ

Must read

ಬೆಂಗಳೂರು: ಕೋರ್ ಕಮಿಟಿ ಸಭೆಯಲ್ಲಿ ಮಂಡ್ಯ, ಕೋಲಾರ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಿದೆ. ಮಂಡ್ಯಕ್ಕೆ ಕುಮಾರಸ್ವಾಮಿ ಅವರ ಹೆಸರೇ ಅಧಿಕೃತ ಆಗಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಜೆಪಿ ನಗರ ನಿವಾಸದ ಬಳಿ ಮಾತನಾಡಿದ ಅವರು, ಕೋರ್ ಕಮಿಟಿ ಸಭೆಯಲ್ಲಿ ಮಂಡ್ಯ, ಕೋಲಾರ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಿದೆ. ಮಂಡ್ಯಕ್ಕೆ ಕುಮಾರಸ್ವಾಮಿ ಅವರ ಹೆಸರೇ ಅಧಿಕೃತ ಆಗಿದೆ ಎಂದು ಹೇಳಿದ್ದಾರೆ.
ಮಂಡ್ಯದ ಜೆಡಿಎಸ್‌ ಕಾರ್ಯಕರ್ತರ, ನಾಯಕರ ಒತ್ತಾಸೆಗೆ ಬೆಲೆ ಕೊಟ್ಟು ಕುಮಾರಸ್ವಾಮಿ ಸ್ಪರ್ಧೆ ಮಾಡ್ತಿದ್ದಾರೆ. ಮಂಡ್ಯ ಜಿಲ್ಲೆಗೆ ಆದ ಅನ್ಯಾಯ ಸರಿಪಡಿಸಬೇಕು. ಕುಮಾರಸ್ವಾಮಿ ಅವರಿಗೆ ರಾಜ್ಯದ ಪರವಾಗಿ ಬದ್ದತೆ ಇದೆ. ರಾಜ್ಯದ ಪರವಾಗಿ ಕೆಲಸ ಮಾಡ್ತಾರೆ ಅಂತ ಬಿಜೆಪಿ ಹೈಕಮಾಂಡ್ ನಾಯಕರಿಗೂ ಅನ್ನಿಸಿದೆ. ಅಧಿಕೃತವಾಗಿ ಕುಮಾರಸ್ವಾಮಿ ಅವರು ಅಭ್ಯರ್ಥಿ ಆಗೋ ಬಗ್ಗೆ ವರಿಷ್ಠರು ಅಧಿಕೃತ ಘೋಷಣೆ ಮಾಡ್ತಾರೆ ಅಂತ ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article