ಮಂಡ್ಯದಲ್ಲಿ ಬಿಜೆಪಿ ಸಂಘಟಿಸಲು ನನ್ನ ಹೋರಾಟ ಇದೆ !

Date:

ಮಂಡ್ಯ: ನಾನು ನನ್ನ ಟಿಕೆಟ್‌ಗಾಗಿ ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ಮಂಡ್ಯಕ್ಕೋಸ್ಕರ, ಮಂಡ್ಯದಲ್ಲಿ ಬಿಜೆಪಿ ಸಂಘಟಿಸಲು ನನ್ನ ಹೋರಾಟ ಇದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಮಂಡ್ಯ ಕ್ಷೇತ್ರ ಅಭ್ಯರ್ಥಿಯ ಬಗ್ಗೆ ಅಂತೆ ಕಂತೆ ಮೊದಲಿನಿಂದಲೂ ಇದೆ. ಅಧಿಕೃತ ನಿರ್ಧಾರ ಬರೋವರೆಗೂ ಕಾಯೋಣ. ಮಂಡ್ಯ ಬಿಜೆಪಿಗೆ ಸಿಗಲಿದೆ ಎಂಬ ವಿಶ್ವಾಸ ನನಗಿದೆ. ನಾನು ನನ್ನ ಟಿಕೆಟ್‌ಗಾಗಿ ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ಮಂಡ್ಯಕ್ಕೋಸ್ಕರ, ಮಂಡ್ಯದಲ್ಲಿ ಬಿಜೆಪಿ ಸಂಘಟಿಸಲು ನನ್ನ ಹೋರಾಟ ಇದೆ ಎಂದರು.
ಈ ವೇಳೆ ಮಂಡ್ಯದಿಂದ ಸ್ಪರ್ಧೆ ಮಾಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ನಕ್ಕು ಉತ್ತರ ನೀಡದೇ ಸುಮಲತಾ ಹೊರಟರು. ಈ ಮೂಲಕ ಇನ್ನಷ್ಟು ಕುತೂಹಲವನ್ನು ಸುಮಲತಾ ಮೂಡಿಸಿದ್ದಾರೆ. ನನಗೆ ಟಿಕೆಟ್ ಪಡೆಯುವ ಉದ್ದೇಶ ಇದ್ದಿದ್ದರೆ ಎಲ್ಲಾದರೂ ಅವಕಾಶ ಸಿಗುತ್ತಿತ್ತು. ಜೆಡಿಎಸ್‌ ನಾಯಕರು ಏನಾದರೂ ಹೇಳಬಹುದು. ಅಂತಿಮ ಘೋಷಣೆ ಆಗುವವರೆಗೂ ಮಾತನಾಡುವುದು ಸೂಕ್ತವಲ್ಲ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...