ಮಂಡ್ಯದಲ್ಲಿ ಭೀಕರ ಅಪಘಾತ: ಮರಕ್ಕೆ KSRTC ಬಸ್ ಡಿಕ್ಕಿ: ಹಲವರು ಗಂಭೀರ!
ಮಂಡ್ಯ:- ಮಂಡ್ಯದ K.R. ಪೇಟೆ ತಾಲ್ಲೂಕು ಕುಂದನಹಳ್ಳಿ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾಕಷ್ಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೌದು, ಅಪಘಾತಕ್ಕೀಡಾದ ಬಸ್ ನಲ್ಲಿ ಸುಮಾರು 25 ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ, ಅದರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಲೇನಹಳ್ಳಿ ಗ್ರಾಮದಿಂದ ಕೆ.ಆರ್.ಪೇಟೆಗೆ ಆಗಮಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.