ಮಂಡ್ಯದಲ್ಲಿ ಮಾಜಿ ಶಾಸಕ ಸುರೇಶ್ ಗೌಡರ ಕಾರು ಅಪಘಾತ

tnit editors
1 Min Read

ಮಂಡ್ಯದಲ್ಲಿ ಮಾಜಿ ಶಾಸಕ ಸುರೇಶ್ ಗೌಡರ ಕಾರು ಅಪಘಾತ
ಮಂಡ್ಯ, ಫೆ. 22: ನಾಗಮಂಗಲ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಅವರು ಕಾರು ಅಪಘಾತದಿಂದ ಪಾರಾಗಿದ್ದಾರೆ. ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ಕಳೆದ ರಾತ್ರಿ ನಡೆದಿದೆ.
ಕಾರ್ಯಕರ್ತರ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಕಾರು ಭಾಗಶಃ ಜಖಂಗೊಂಡಿದೆ.
ಅದೃಷ್ಟವಶಾತ್ ಸುರೇಶ್ ಗೌಡರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರ ಕೈಗೆ ಪೆಟ್ಟು ಬಿದ್ದಿದ್ದು, ಚಾಲಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಕಾರು ಪಲ್ಟಿಯಾದ ತಕ್ಷಣ ಗನ್ ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸುರೇಶ್ ಗೌಡರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Share This Article