ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ವಿಜಯೇಂದ್ರ ಭೇಟಿ

By
0 Min Read

ರಾಯಚೂರು: ಲೋಕಸಭೆ ಚುನಾವಣಾ ತಯಾರಿ ಹಿನ್ನೆಲೆ ಜಿಲ್ಲಾ ಪ್ರವಾಸದಲ್ಲಿರುವ ವಿಜಯೇಂದ್ರ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದರು, ಮಂಚಾಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಆಶೀರ್ವಚನ ಪಡೆದರು.
ಫಲಮಂತ್ರಾಕ್ಷತೆ, ಶೇಷವಸ್ತ್ರ ನೆನಪಿನ ಕಾಣಿಕೆ ನೀಡಿ ಶ್ರೀಗಳು ಆಶಿರ್ವದಿಸಿದರು. ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಬಳಿಕ ವಿಜಯೇಂದ್ರ ರಾಯಚೂರಿನಿಂದ ಜಿಲ್ಲಾ ಪ್ರವಾಸ ಆರಂಭಿಸಲಿದ್ದಾರೆ. ಇಂದಿನಿಂದ ಎರಡು ದಿನ ಕಾಲ ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಿಗೆ ವಿಜಯೇಂದ್ರ ಭೇಟಿ ನೀಡಲಿದ್ದಾರೆ.

Share This Article