ಮಕ್ಕಳನ್ನು ಉಳಿಸುವ ಕೆಲಸ ಮಾಡದೆ ಸಮಾವೇಶ ಮಾಡಿದ್ರೆ ಪಾಪ ತಟ್ಟಲಿದೆ: ಆರ್.ಅಶೋಕ್
ಬೆಂಗಳೂರು: ಮಕ್ಕಳನ್ನು ಉಳಿಸುವ ಕೆಲಸ ಮಾಡದೆ ಸಮಾವೇಶ ಮಾಡಿದ್ರೆ ಪಾಪ ತಟ್ಟಲಿದೆ ಎಂದು ತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ರಾಹುಲ್ ಗಾಂಧಿ, ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ, ಜನರ ಬಳಿಗೆ ಹೋಗಿ ಟವೆಲ್‌ನಲ್ಲಿ ಕಣ್ಣೀರು ಒರೆಸಿಕೊಂಡರು. ಈಗ ತಾಯಂದಿರು ಸತ್ತಿರುವಾಗ ಜನಕಲ್ಯಾಣ ಸಮಾವೇಶ ಮಾಡಿದ್ದಾರೆ.
ಆ ಸಮಾವೇಶದಲ್ಲಿ ರಾಜಕೀಯ ಮಾತಾಡುವುದು ಬಿಟ್ಟರೆ, ಜನರ ಪರವಾಗಿ ಮಾತಾಡಿಲ್ಲ. 28 ಔಷಧಿಗಳು ಕಳಪೆ ಎಂದಮೇಲೂ ಅದೇ ಕಂಪನಿಯಿಂದ ಔಷಧಿ ಖರೀದಿಸಲಾಗಿದೆ. ಮಕ್ಕಳನ್ನು ಉಳಿಸುವ ಕೆಲಸ ಮಾಡದೆ ನೂರು ಸಮಾವೇಶ ಮಾಡಿದರೂ ಶಾಪ ಹಾಗೂ ಪಾಪ ತಟ್ಟಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಮಾಡಿದ ನಂತರವೂ ತಾಯಂದಿರು ಸಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗೆ ಸರ್ಕಾರದಲ್ಲಿ ಹಿಡಿತವಿಲ್ಲ ಎಂದರ್ಥ. ಈ ಸಾವಿನ ಹೊಣೆಯನ್ನು ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಹೇಳಿದರು.