ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ: ‘SSLC’ ವಿದ್ಯಾರ್ಥಿ ಸಾವು..!

Date:

ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ: ‘SSLC’ ವಿದ್ಯಾರ್ಥಿ ಸಾವು..!

ತುಮಕೂರು: ಹಿರಿಯರು, ವಯೋವೃದ್ಧರಿಗೆ ಬಾಧಿಸುತ್ತಿದ್ದ ಹೃದಯಾಘಾತ ಈಗ ಎಳೆಯರಲ್ಲೂ ಕಾಡುತ್ತಿದ್ದು, ಇದೀಗ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭೈರಾಪುರ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ.
ರಾಹುಲ್ (16) ಮೃತ ವಿದ್ಯಾರ್ಥಿ. ಭೈರಾಪುರ ಗ್ರಾಮದ ಜಯರಾಂ ಪುತ್ರ ರಾಹುಲ್ ಚಿಕ್ಕನಾಯಕನಹಳ್ಳಿ ಪಟ್ಟಣದ ಜಿಎಚ್‌ಎಸ್‌ನಲ್ಲಿ ಹತ್ತನೇ ತರಗತಿ ಓದುತ್ತಿದ್ದ. ಶುಕ್ರವಾರ ಶಾಲೆಗೆ ಹೋಗಿ ಮನೆಗೆ ವಾಪಸ್ ಬಂದಿದ್ದ ರಾಹುಲ್‌ಗೆ ರಾತ್ರಿ 9:30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ.
ಕೂಡಲೇ ರಾಹುಲ್‌ನನ್ನು ಪೋಷಕರು ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ರಾಹುಲ್ ಕೊನೆಯುಸಿರೆಳೆದಿದ್ದಾನೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share post:

Subscribe

spot_imgspot_img

Popular

More like this
Related

ಸಂತೋಷದಿಂದ ಹಬ್ಬವನ್ನು ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ: ನಿಖಿಲ್ ಕುಮಾರಸ್ವಾಮಿ

ಸಂತೋಷದಿಂದ ಹಬ್ಬವನ್ನು ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ: ನಿಖಿಲ್ ಕುಮಾರಸ್ವಾಮಿ ಬೆಂಗಳೂರು...

ಕರ್ನಾಟಕದಲ್ಲಿ ಭಾರೀ ಮಳೆ: 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಭಾರೀ ಮಳೆ: 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು: ರಾಜ್ಯದ...

ಮಧ್ಯಾಹ್ನದ ನಿದ್ದೆ ಒಳ್ಳೆಯದೋ ಕೆಟ್ಟದ್ದೋ? ತಜ್ಞರ ಅಭಿಪ್ರಾಯ ಇಲ್ಲಿದೆ

ಮಧ್ಯಾಹ್ನದ ನಿದ್ದೆ ಒಳ್ಳೆಯದೋ ಕೆಟ್ಟದ್ದೋ? ತಜ್ಞರ ಅಭಿಪ್ರಾಯ ಇಲ್ಲಿದೆ ಮಧ್ಯಾಹ್ನ ಊಟದ ನಂತರ...

ಓಲಾ ಕಂಪನಿ ಸಿಬ್ಬಂದಿ ಅನುಮಾನಾಸ್ಪದ ಸಾವು – ಮೂವರ ವಿರುದ್ಧ ದೂರು

ಓಲಾ ಕಂಪನಿ ಸಿಬ್ಬಂದಿ ಅನುಮಾನಾಸ್ಪದ ಸಾವು – ಮೂವರ ವಿರುದ್ಧ ದೂರು ಬೆಂಗಳೂರು:...