ಮಕ್ಕಳೇ ಶಾಲೆಗೆ ತೆರಳಲು ತಯಾರಾಗಿ; ಮುಹೂರ್ತ ಫಿಕ್ಸ್!

0
35

ಕೊರೊನಾವೈರಸ್ ಸೋಂಕು ಹಿನ್ನೆಲೆಯಲ್ಲಿ ಒಂದೂವರೆ ವರ್ಷದಿಂದ ಮುಚ್ಚಿರುವ ಶಾಲೆಗಳನ್ನು ಆಗಸ್ಟ್ ಮೊದಲ ವಾರದಲ್ಲಿಯೇ ಆರಂಭಿಸಲು ಶಿಕ್ಷಣ ಇಲಾಖೆ ಗಂಭೀರ ಚಿಂತನೆ ನಡೆಸಿದೆ. ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಶಾಲೆಗಳು ತೆರೆಯುವ ಸಂಬಂಧ ರಚನೆಯಾಗಿರುವ ತಜ್ಞರ ಸಮಿತಿ ವರದಿಯನ್ನು ನೀಡಿದೆ. ವರದಿಯನ್ನು ಜಾರಿಗೆ ತರಲು ಸರ್ಕಾರಕ್ಕೆ ಶಿಫಾರಸು ಮಾಡುವ ಸಂಬಂಧ ಶಿಕ್ಷಣ ಇಲಾಖೆ ಶುಕ್ರವಾರ ಕರೆದಿರುವ ಸಭೆಯಲ್ಲಿ ಮಹತ್ವದ ತೀರ್ಮಾನ ಹೊರ ಬೀಳಲಿದೆ.

ಮೂರನೇ ಅಲೆ ಭೀತಿ: ಕೊರೊನಾ ಎರಡನೇ ಅಲೆ ಹೊಡೆತದಿಂದ ತತ್ತರಿಸಿರುವ ರಾಜ್ಯಗಳು ಕೊರೊನಾ ಮೂರನೇ ಅಲೆ ಬಗ್ಗೆಯೂ ಭೀತಿ ಮೂಡಿದೆ. ಈ ಹಿನ್ನೆಲೆಯಲ್ಲಿ ಅತಿ ಜಾಗರೂಕವಾಗಿ ಶಾಲೆಗಳನ್ನು ತೆರೆಯುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ಈಗಾಗಲೇ ಗುಜರಾತ್ ಮತ್ತು ಹರ್ಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲಾ ಕಾಲೇಜುಗಳನ್ನು ತೆರೆಯಲಾಗಿದೆ.

ಎರಡು ದಿನದ ಹಿಂದಷ್ಟೇ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮುಖ್ಯಸ್ಥರು ತಿಳಿಸಿದ್ದಾರೆ. ಇದೇ ನಿಟ್ಟಿನಲ್ಲಿ ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆ ಕಾಲೇಜುಗಳನ್ನು ಕೆಲವು ಷರತ್ತುಗಳ ಆಧಾರದ ಮೇಲೆ ತೆರೆಯಲು ಅವಕಾಶ ಕಲ್ಪಿಸಿದೆ. ಇದೀಗ ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ತೆರೆಯುವ ಸಂಬಂಧ ಇಲಾಖಾ ಮಟ್ಟದಲ್ಲಿ ಗಂಭೀರ ಚಿಂತನೆ ನಡೆದಿದೆ.

LEAVE A REPLY

Please enter your comment!
Please enter your name here