ಟಾಲಿವುಡ್ ನ ಖ್ಯಾತ ಜೋಡಿ, ಕ್ಯೂಟ್ ಕಪಲ್, ಸ್ಯಾಮ್-ಚೈ ಎಂದೆಲ್ಲ ಕರೆಸಿಕೊಳ್ಳುತ್ತಿದ್ದ ನಟಿ ಸಮಂತಾ ಮತ್ತು ನಾಗ ಚೈತನ್ಯ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿ 3 ದಿನಗಳೇ ಕಳೆಯಿತು. ಆದರೂ ಈ ತಾರಾಜೋಡಿಯ ವಿಚ್ಛೇದನದ ಬಗ್ಗೆ ಇನ್ನು ಚರ್ಚೆ ನಡೆಯುತ್ತಿದೆ. ಅಭಿಮಾನಿಗಳು ಇನ್ನು ನೆಚ್ಚಿನ ಜೋಡಿಯ ಡಿವೋರ್ಸ್ ವಿಚಾರವನ್ನು ಅರಗಿಸಿಕೊಳ್ಳಲು ಸಾಧ್ಯವಾಗಿಲ್ಲ.
ಕಳೆದ ಒಂದು ತಿಂಗಳಿಂದ ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನ ವಿಚಾರ ಸದ್ದಿ ಮಾಡುತ್ತಿದ್ದು. ಆದರೆ ಈ ಬಗ್ಗೆ ಸಮಂತಾ ಅಥವಾ ನಾಗ ಚೈತನ್ಯ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಇರಲಿಲ್ಲ. ಅಕ್ಟೋಬರ್ 2ರಂದು ವಿಚ್ಛೇದನ ಘೋಷಣೆ ಮಾಡುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದರು. ಈ ಮೂಲಕ 3 ವರ್ಷದ ದಾಂಪತ್ಯ ಜೀವನಕ್ಕೆ ಎಳ್ಳು-ನೀರು ಬಿಟ್ಟರು.
ಇಬ್ಬರು ಬೇರೆ ಬೇರೆ ಆಗುತ್ತಿದ್ದಾರೆ ಎನ್ನುವ ವಿಚಾರ ಬಹಿರಂಗವಾಗುತ್ತಿದ್ದಂತೆ ಕೇವಲ ಟಾಲಿವುಡ್ ಮಾತ್ರವಲ್ಲದೆ ದೇಶದಲ್ಲೇ ಸಂಚಲನ ಸೃಷ್ಟಿಸಿತ್ತು. ಇನ್ನು ಸಮಂತಾ ಮತ್ತು ನಾಗ ಚೈತನ್ಯ ಇಬ್ಬರು ವಿಚ್ಛೇದನ ಘೋಷಣೆ ಮಾಡಿದ ಬಳಿಕ ನಾಗ ಚೈತನ್ಯ ತಂದೆ ನಾಗಾರ್ಜುನ ಭಾರವಾದ ಹೃದಯದಿಂದ ಇದು ದುರದೃಷ್ಟಕರ ಎಂದು ಪೋಸ್ಟ್ ಮಾಡಿದ್ದರು. ಆದರೆ ಸಮಂತಾ ಮೇಲಿನ ಪ್ರೀತಿ, ಗೌರವ ಕಡಿಮೆಯಾಗಲ್ಲ ಎಂದು ಹೇಳಿದ್ದರು. ಆದರೆ ಸಮಂತಾ ತಂದೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಮೊದಲ ಬಾರಿಗೆ ಸಮಂತಾ ತಂದ ಪ್ರತಿಕ್ರಿಯೆ ನೀಡಿದ್ದಾರೆ. ಮಗಳ ವಿಚ್ಛೇದನದ ಸುದ್ದಿ ಕೇಳಿ ಮನಸ್ಸು ಸ್ತಬ್ದವಾಗಿದೆ ಎಂದು ಹೇಳಿದ್ದಾರೆ. ಮುಂದೆ ಓದಿ..
“ಅವರಿಬ್ಬರು ಬೇರೆ ಬೇರೆ ಆಗುತ್ತಿದ್ದಾರೆ ಎನ್ನುವ ವಿಚಾರ ತಿಳಿದ ಕ್ಷಣದಿಂದ ನನ್ನ ಮನಸ್ಸು ಸ್ತಬ್ದವಾಗಿದೆ. ಈ ಸಮಯದಲ್ಲಿ ನನಗೆ ಏನು ತೋಚುತ್ತಿಲ್ಲ. ನಾನು ನನ್ನ ಮಗಳ ಬಳಿ ಈ ಬಗ್ಗೆ ಮಾತನಾಡುತ್ತೇನೆ. ವಿಚ್ಛೇದನ ನಿರ್ಧಾರದ ಬಗ್ಗೆ ಮತ್ತೊಮ್ಮೆ ಯೋಚಿಸುವಂತೆ ಹೇಳುತ್ತೇನೆ. ಸದ್ಯದಲ್ಲೇ ಎಲ್ಲಾ ಸರಿಹೋಗುವ ವಿಶ್ವಾಸವಿದೆ ” ಎಂದು ಸಮಂತಾ ತಂದೆ ಜೋಸೆಫ್ ಪ್ರಭು ಹೇಳಿದ್ದಾರೆ. ಸಮಂತಾ ತಂದೆಯ ಹೇಳಿಕೆಯ ಬಳಿಕ ಮಗಳ ಜೀವನದ ಬಗ್ಗೆ ತಂದೆಗೆ ಈ ಮೊದಲು ತಿಳಿದಿರಲಿಲ್ವಾ ಎನ್ನುವ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ನೆಟ್ಟಿಗರು.