ಮಚ್ಚು ಹಿಡಿದು ರೀಲ್ಸ್ ಪ್ರಕರಣ: ವಿನಯ್, ರಜತ್ಗೆ ಜಾಮೀನು ಮಂಜೂರು
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ ಬುಜ್ಜಿ ಹಾಗೂ ವಿನಯ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 24ನೇ ಎಸಿಜೆಎಂ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಿದೆ. ಇಬ್ಬರಿಗೂ ಸಹ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು,
10 ಸಾವಿರ ರೂಪಾಯಿ ಶೂರಿಟಿ ನೀಡುವ ಷರತ್ತನ್ನು ನ್ಯಾಯಾಲಯ ವಿಧಿಸಿದೆ. ಇಂದು ನಡೆದ ವಿಚಾರಣೆಯಲ್ಲಿ ಪೊಲೀಸರ ಪರ ವಾದ ಮಾಡಿದ ವಕೀಲ ಚಂದ್ರೇಗೌಡ ಅವರು, ಆರೋಪಿಗಳು ಸಾಕ್ಷ್ಯನಾಶ ಮಾಡಿದ್ದು ಅವರಿಗೆ ಜಾಮೀನು ನೀಡಬಾರದು ಎಂದು ವಾದಿಸಿದರು.
ಈ ವೇಳೆ ನ್ಯಾಯಾಧೀಶರು, ಶೂಟಿಂಗ್ನಲ್ಲಿ ಮಚ್ಚು ಹಿಡಿದರೆ ಏನು ಮಾಡೋದು ಎಂದು ಕೇಳಿದರು. ಅದಕ್ಕೆ ವಕೀಲರು, ಕನಸಿನಲ್ಲಿಯೂ ಹಾಗೆ ಮಾಡೊಲ್ಲ, ಜಾಮೀನು ಮಂಜೂರು ಮಾಡಿ ಎಂದು ಮನವಿ ಮಾಡಿದರು. ಪೊಲೀಸರು ಸಹ ತಮಗೆ ವಿನಯ್ ಮತ್ತು ರಜತ್ ಅವರ ಕಸ್ಟಡಿಯ ಅವಶ್ಯಕತೆ ಇಲ್ಲವೆಂದು ಹೇಳಿದರು. ಹಾಗಾಗಿ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.