Home ಎಲ್ಲೆಲ್ಲಿ ಏನೇನು.? ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

0
ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ: ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ಲೋ ಬಿಪಿಯಿಂದ ಮೃತಪಟ್ಟಿರುವ ಘಟನೆ ಚಳ್ಳಕೆರೆಯ ಹೊಟ್ಟೆಪ್ಪನಹಳ್ಳಿಯಲ್ಲಿ ನಡೆದಿದೆ. ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಕರ್ತವ್ಯದ ವೇಳೆ ಮತಗಟ್ಟೆಯಲ್ಲಿ ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.


ಅವರನ್ನು ತಕ್ಷಣ ಚಳ್ಳಕೆರೆ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.