ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

Date:

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಚಿನ್ನಕ್ಕೆ ಭಾರತದಂತಹ ದೇಶದಲ್ಲಿ ಬೇಡಿಕೆ ಇದ್ದೆ ಇರುತ್ತದೆ. ಇಲ್ಲಿ ಚಿನ್ನವನ್ನು ಸಮೃದ್ಧಿ ಹಾಗೂ ಸಂಪತ್ತಿನ ಪ್ರತೀಕವೆಂದೇ ಭಾವಿಸಲಾಗಿದೆ. ಹಾಗಾಗಿ, ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತವೆ. ಅಷ್ಟಕ್ಕೂ ಮಾರುಕಟ್ಟೆಯಲ್ಲಿ ಚಿನ್ನ ಬೆಳ್ಳಿಗಳ ದರಗಳು ಏರಿಳಿತ ಆಗುತ್ತಲೇ ಇರುತ್ತದೆ.

ಸಾಮಾನ್ಯವಾಗಿ ಅಂತಾರಾಷ್ಟ್ರೀಯವಾಗಿ ಜರುಗುವ ವಿದ್ಯಮಾನಗಳು ಹಾಗೂ ಸ್ಥಳೀಯ ಬೇಡಿಕೆಯನ್ನವಲಂಬಿಸಿ ಈ ಲೋಹಗಳ ದರಗಳು ಬದಲಾಗುತ್ತಿರುತ್ತವೆ. ಒಟ್ಟಿನಲ್ಲಿ ಚಿನ್ನ ಒಂದು ವಿಶ್ವಾಸಾರ್ಹವಾದ ಮನುಷ್ಯನ ಸಂಗಾತಿಯಾಗಿದ್ದು ಆರ್ಥಿಕವಾಗಿ ತಲೆದೋರುವ ಕಷ್ಟಕಾಲದಲ್ಲಿ ಆಪದ್ಬಾಂಧವನಂತೆ ಕಾರ್ಯನಿರ್ವಹಿಸುತ್ತದೆ ಎಂದರೆ ತಪ್ಪಾಗಲ್ಲ.

ಹಾಗಾಗಿ ಭಾರತದಲ್ಲಿ ಚಿನ್ನ ಹಾಗೂ ಅದರ ಆಭರಣಗಳಿಗೆ ಹೆಚ್ಚಿನ ಬೆಡಿಕೆಯಿರುತ್ತದೆ.ಕಳೆದ 4 ದಿನದಲ್ಲಿ ಅಂದರೆ ಡಿ.22 ರಿಂದ 25 ರೊಳಗೆ ಬರೋಬ್ಬರಿ 5,070 ರೂಪಾಯಿ ಹೆಚ್ಚಳ ಕಂಡಿದೆ.ಡಿಸೆಂಬರ್ 25 ಗುರುವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13925 ರೂಪಾಯಿ ಇದ್ದು,

ಇಂದು 32 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,39,250 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ ಇಂದು 320 ರೂ ಹೆಚ್ಚಳ ಆಗಿದೆ.22 ಕ್ಯಾರೆಟ್ 1 ಗ್ರಾಂ ಬೆಲೆ 12765 ರೂಪಾಯಿ ಇದ್ದು, ಇಂದು 30 ರೂ ಏರಿಕೆ ಆಗಿದೆ. 10 ಗ್ರಾಂ ಬೆಲೆ 1,27,650 ರೂಪಾಯಿ ಇದೆ. ಇಂದು 10 ಗ್ರಾಂ ನಲ್ಲಿ 300 ರೂ ಹೆಚ್ಚಳ ಆಗಿದೆ.

ಬೆಂಗಳೂರಲ್ಲಿ 1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 13925 ರೂಪಾಯಿ ಇದ್ದು, 10 ಗ್ರಾಂ ಶುದ್ಧ ಚಿನ್ನಕ್ಕೆ 1,39,250 ರೂಪಾಯಿ ಇದೆ. ಈ ಬೆಲೆಯಲ್ಲಿ ಜಿಎಸ್‌ಟಿ ಸೇರಿಲ್ಲ, ಹೀಗಾಗಿ ಮಳಿಗೆಗಳಲ್ಲಿ ವ್ಯತ್ಯಾಸ ಇರಲಿದೆ. ಬೆಳ್ಳಿ ಬೆಲೆ ಇಂದು ಕೂಡಾ ಏರಿಕೆ ಆಗಿದ್ದು, 1 ರೂ ಹೆಚ್ಚಳ ಆಗಿ ಬೆಲೆ 234 ರೂ ಆಗಿದ್ದು, ಕೆಜಿಗೆ 2,34,000 ರೂ ಇದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು:...

ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಲು ಡಿ.ಕೆ. ಶಿವಕುಮಾರ್ ಮನವಿ

ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಲು ಡಿ.ಕೆ....