ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದ್ದ ಬಿಜೆಪಿ ಮತ್ತು ಪ್ರಧಾನಿ ಮೋದಿಗೆ ಸಮೀಕ್ಷೆಯ ವರದಿ ಶಾಕ್ ನೀಡಿದೆ.
ಸಾರ್ವತ್ರಿಕ ಲೋಕಸಭೆ ಚುನಾವಣೆಯ 4 ಹಂತದ ಮತದಾನ ಮುಕ್ತಾಯವಾಗಿದ್ದು, 5ನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಮತ್ತೆ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿರುವ ಪ್ರಧಾನಿ ಮೋದಿಗೆ ಈ ಹಂತದಲ್ಲಿ ಬಂದಿರುವ ಸಮೀಕ್ಷೆ ಆಘಾತ ತಂದಿದೆ ಎನ್ನಲಾಗಿದೆ.
ಹಿಂದಿ ಭಾಷಿಕ ರಾಜ್ಯಗಳಲ್ಲಿ ಈ ಬಾರಿ ಬಿಜೆಪಿ ಗೆಲುವು ಸುಲಭವಾಗಿಲ್ಲ ಎಂದು ಹೇಳಲಾಗಿದೆ 2014ರ ಚುನಾವಣೆಯಲ್ಲಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಭರ್ಜರಿ ಗೆಲುವು ಪಡೆದಿದ್ದ ಬಿಜೆಪಿ ಈ ಬಾರಿ ಹಿನ್ನಡೆ ಅನುಭವಿಸಲಿದೆ. ಕಳೆದ ಬಾರಿ 154 ಸ್ಥಾನಗಳಲ್ಲಿ 142 ರಲ್ಲಿ ಬಿಜೆಪಿ ಗೆಲುವು ಕಂಡಿತ್ತು.ಈ ಬಾರಿ 75 ಸೀಟು ಗಳಿಸುವುದು ಕಷ್ಟ ಎಂದು ಹೇಳಲಾಗಿದೆ.
ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ, ರಾಜಸ್ಥಾನ, ದೆಹಲಿ, ಮಧ್ಯಪ್ರದೇಶ, ಮೊದಲಾದ ರಾಜ್ಯಗಳಲ್ಲಿ ಬಿಜೆಪಿಗೆ ಈ ಬಾರಿ ಹಿನ್ನಡೆಯಾಗಬಹುದು ಎಂದು ಹೇಳಲಾಗಿದ್ದು, ಇದರಿಂದಾಗಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರು ಮತ್ತಷ್ಟು ಅಗ್ರೆಸ್ಸಿವ್ ಪ್ರಚಾರ ಕೈಗೊಂಡಿದ್ದಾರೆ. ಗೆಲುವಿಗೆ ಎಲ್ಲಾ ರೀತಿಯ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.