ಮತ್ತೆ ಕನ್ನಡ ಧ್ವಜ ಸುಟ್ಟ ಶಿವಸೇನೆ

Date:

ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಕನ್ನಡಿಗರನ್ನು ಕೆಣಕುತ್ತಿರುವ ಮಹಾರಾಷ್ಟç ಚಾಳಿ ಮುಂದುವರಿದಿದ್ದು, ಬುಧವಾರ ಮಧ್ಯಾಹ್ನ ಬೆಳಗಾವಿ ಗಡಿ ಭಾಗದ ಚೆಕ್‌ಪೋಸ್ಟ್ ಬಳಿಯೇ ಕನ್ನಡ ಧ್ವಜ ಸುಟ್ಟು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕೃತಿ ದಹಿಸಿ ಮೊಂಡುತನ ತೋರಿದ್ದಾರೆ.

ಗಡಿ ಭಾಗದ ಕಾಗವಾಡ ಸಮೀಪದ ಮೈಶಾಳ ಎಂಬ ಗ್ರಾಮದ ಬಳಿ ಇರುವ ಕರ್ನಾಟಕ ಚೆಕ್‌ಪೋಸ್ಟ್ ಬಳಿಯೇ ಶಿವಸೇನೆ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಬೆಂಗಳೂರಿನಲ್ಲಿ ಅವಮಾನ ಮಾಡಿ, ಈಗ ಬೆಳಗಾವಿಯಲ್ಲಿಯೂ ಅಗೌರವ ತೋರಿದೆ ಎಂದು ಆಪಾದಿಸಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದರು.

ಶಿವಾಜಿ ಮಹಾರಾಜರನ್ನು ಅವಮಾನ ಮಾಡುವುದು ಮುಂದುವರಿದಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಹಾಗೂ ಶಿವಸೇನೆ ಪ್ರಮುಖ ದಿ. ಬಾಳಾ ಠಾಕ್ರೆ ಅವರ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿರುವುದನ್ನು ಸರ್ಕಾರ ತಡೆಯುತ್ತಿಲ್ಲ. ಇನ್ನು ಮುಂದೆ ಕರ್ನಾಟಕದ ಒಳಗೆ ನುಗ್ಗಿ ಕನ್ನಡಿಗರನ್ನು ಅಟ್ಟಾಡಿಸುತ್ತೇವೆ’ ಎಂದು ಮಿರಜ್ ಶಿವಸೇನೆ ಮುಖಂಡ ಚಂದ್ರಕಾಂತ ಮೈಗೂರೆ ಕಿಡಿಕಾರಿದರು.

ಕೆಲ ದಿನಗಳ ಹಿಂದೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕನ್ನಡ ಬಾವುಟದ ಮೇಲೆ ನಾಯಿ ಮಲಗಿಸಿ, ಚಪ್ಪಲಿಯಿಂದ ಹೊಡೆದು, ಬಾವುಟ ಸುಟ್ಟು ಹಾಕಲಾಗಿತ್ತು. ಜತೆಗೆ ಮಿರಜ್, ಕೊಲ್ಲಾಪುರ, ಥಾಣೆಯಲ್ಲಿ ಕರ್ನಾಟಕದ ವಾಹನಗಳ ಮೇಲೆ ಶಿವಸೇನೆ ಕಾರ್ಯಕರ್ತರು ದಾಳಿ ನಡೆಸಿ ಕಲ್ಲು ತೂರಾಟ ನಡೆಸಿದ್ದರು. ಹೊಟೇಲ್, ಅಂಗಡಿಗಳ ಮೇಲಿರುವ ಕನ್ನಡ ಭಾಷೆಯ ಫಲಕಗಳನ್ನು ಹರಿದು ಹಾಕಿದ್ದರು.

Share post:

Subscribe

spot_imgspot_img

Popular

More like this
Related

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್ ಬಡ್ತಿ, 20 ಮಂದಿಗೆ ವರ್ಗಾವಣೆ

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್...

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು ರಾತ್ರಿ...

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...