ಮತ್ತೆ ಗನ್ ಸೌಂಡ್: ವ್ಯಕ್ತಿಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದ್ದ ಆರೋಪಿಗೆ ಗುಂಡೇಟು!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ವ್ಯಕ್ತಿಯೋರ್ವನನ್ನು ನಗ್ನಗೊಳಿಸಿ ಹಲ್ಲೆ ಮಾಡಿ ತುಮಕೂರಿನಲ್ಲಿ ತಲೆ ಮರಿಸಿಕೊಂಡಿದ್ದ ಆರೋಪಿ ಪವನ್ ಅಲಿಯಾಸ್ ಕಡುಬು ಕಾಲಿಗೆ ಗೋವಿಂದರಾಜನಗರ ಇನ್ಸ್ಪೆಕ್ಟರ್ ಸುಬ್ರಮಣ್ಯ ಅವರು ಗುಂಡು ಹಾರಿಸಿದ್ದಾರೆ.
ಹೌದು ಯುವಕನ ಬಟ್ಟೆ ಬಿಚ್ಚಿಸಿ ರೌಡಿಶೀಟರ್ ಪವನ್ @ಕಡಬು ಹಲ್ಲೆ ಮಾಡಿದ್ದ. ಈ ಸಂಬಂಧ ದೂರು ಆಧರಿಸಿ ಬಂಧಿಸಲು ಹೋದ ವೇಳೆ ಪೊಲೀಸರ ಮೇಲೆ ಅಟ್ಯಾಕ್ ಗೆ ಮುಂದಾಗಿದ್ದಾನೆ.
ಹೆಡ್ ಕಾನ್ಸ್ಟೇಬಲ್ ವೆಂಕಟೇಶ್ ಮೇಲೆ ಡ್ರಾಗಾರ್ ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಹೀಗಾಗಿ ಪ್ರಾಣ ರಕ್ಷಣೆಗಾಗಿ ಪವನ್ ಕಾಲಿಗೆ ಪೊಲೀಸರು ಗುಂಡು ನುಗ್ಗಿಸಿದ್ದಾರೆ. ಕಾಮಾಕ್ಷಿಪಾಳ್ಯ ಇನ್ಸ್ಪೆಕ್ಟರ್ ನಾಗಶ್ ಹಾಗೂ ಗೋವಿಂದ ರಾಜ್ ನಗರ ಇನ್ಸ್ಪೆಕ್ಟರ್ ಸುಬ್ರಮಣ್ಯರಿಂದ ಶೂಟ್‌ಔಟ್ ನಡೆದಿದೆ. ಆರೋಪಿ ಪವನ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.