ಮತ್ತೆ ಲಾಕ್ ಡೌನ್ ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ

0
89

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ತಜ್ಞರ ಅಭಿಪ್ರಾಯ ಪಡೆದು ಮತ್ತೆ ಶಾಲಾ ಕಾಲೇಜುಗಳನ್ನು ಬಂದ್ ಮಾಡಬೇಕೆ? ಎಂದು ಶೀಘ್ರವೇ ತೀರ್ಮಾನಿಸಲಾಗುವುದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನೆರೆ ರಾಜ್ಯ ತೆಲಂಗಾಣದಲ್ಲಿ ಈಗಾಗಲೇ ಶಾಲೆಗಳನ್ನು ಬಂದ್ ಮಾಡಲಾಗಿದೆ.

ಸದ್ಯಕ್ಕೆ ರಾಜ್ಯದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮಂಗಳವಾರ ಸಂಜೆ ತಜ್ಞರ ಸಭೆ ಕರೆದು ಚರ್ಚಿಸಲಾಗುವುದು. ಲಾಕ್​ಡೌನ್, ಸೆಮಿಲಾಕ್… ಏನು ಮಾಡಿದರೆ ಉತ್ತಮ ಎಂಬುದನ್ನು ತಜ್ಞರ ಸಲಹೆ ಪಡೆದು ನಿರ್ಧರಿಸಲಾಗುವುದು. ಹಿಂದೆ ಲಾಕ್​ಡೌನ್​ದಿಂದ ಜನರು ಸಮಸ್ಯೆ ಅನುಭವಿಸಿದ್ದಾರೆ. ಆರ್ಥಿಕ ಚಟುವಟಿಕೆಗಳು ನಡೆಯಬೇಕು. ಕೋವಿಡ್ ನಿಯಂತ್ರಣದಲ್ಲಿ ಇರುವಂತೆ ನೋಡಿಕೊಳ್ಳಬೇಕು ಎನ್ನುವ ಮೂಲಕ ಲಾಕ್​ಡೌನ್ ಮಾಡಲ್ಲ ಎಂಬ ಮುನ್ಸೂಚನೆಯನ್ನ ಸಿಎಂ ನೀಡಿದರು.

ವಿಶ್ವ ಆರೋಗ್ಯ ಸಂಸ್ಥೆಯು ಅನೇಕ ಮಾರ್ಗದರ್ಶನ ನೀಡಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯೇ ರಾಜ್ಯದಲ್ಲಿಯೂ ಜಾರಿಯಲ್ಲಿದೆ. ನೆರೆಯ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಪ್ರಕರಣಗಳು ಹೆಚ್ಚಾಗಿವೆ. ಹೀಗೆ ಪಕ್ಕದ ರಾಜ್ಯದಲ್ಲಿ ಹೆಚ್ಚಾದಾಗ ನಮ್ಮ ರಾಜ್ಯದಲ್ಲಿ ಹೆಚ್ಚಾಗುವುದು ಸಹಜ. ಇದರ ಬಗ್ಗೆ ಕಟ್ಟೆಚ್ಚರ‌ ವಹಿಸಿ, ಗಡಿಗಳನ್ನು ಬಿಗಿ ಮಾಡಲಾಗಿದೆ ಎಂದು ಸಿಎಂ ಹೇಳಿದರು. ಜನರೇ ಇನ್ನಷ್ಟು ಕಟ್ಟೆಚ್ಚರ ವಹಿಸಬೇಕು ಎಂದು ಕೋರಿದರು.

ಒಂದು ವಾರದಿಂದ ಕರೊನಾ ಹಾಗೂ ಒಮಿಕ್ರಾನ್ ಪ್ರಕರಣ ಹೆಚ್ಚಾಗಿವೆ. ಮೂರನೇ ಅಲೆ ನಿಭಾಯಿಸಲು ಬೇಕಾದ ಔಷಧ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

LEAVE A REPLY

Please enter your comment!
Please enter your name here