ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ತೇರದಾಳದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆ ಬಳಿಕ ನಾನು ಸಿಎಂ ಆಗುತ್ತೇನೆ ಎಂದು ಹೇಳಿರುವುದು ಸಹಜವಾಗಿದೆ ಎಂದು ತಿಳಿಸಿದ್ದಾರೆ.
ಜನಸೇವೆಗೆ ರಾಜಕಾರಣದಲ್ಲಿ ಸ್ಥಾನಮಾನ ಬೇಕಾಗುತ್ತದೆ. ನಾನು ಮುಂದಿನ ಬಾರಿ ಮುಖ್ಯಮಂತ್ರಿ ಆಗುತ್ತೇನೆ ಎಂದು ಅವರು ಹೇಳಿದ್ದಾರೆ. ಅದನ್ನು ಅಪಾರ್ಥ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಅವರೇನು ಸನ್ಯಾಸಿಯೇ ಎಂದು ಹೇಳಿದ್ದಾರೆ.ಬಾಗಲಕೋಟೆಗೆ ಬಂದ ಪ್ರಧಾನಿಯವರು ಬಾಲಾಕೋಟ್ ಬಗ್ಗೆ ಚರ್ಚೆ ಮಾಡಿ ಹೋಗಿದ್ದಾರೆ.