ಮತ್ತೊಮ್ಮೆ ಗೋವಿನ ಮೇಲೆ ವಿಕೃತಿ: ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ
ಬಾಗಲಕೋಟೆ: ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಕ್ರೌರ್ಯ ಮತ್ತೆ ಮುಂದುವರಿದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನ ಬರಮಪ್ಪ ಎಂಬುವರಿಗೆ ಸೇರಿದ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಗ್ರಾಮದ ಭರಮಪ್ಪ ಕುರಿಯವರು ಸಾಕಿರುವ ಹಸುವಿನ ಕೆಚ್ಚಲನ್ನು ದುರುಳರು ಶುಕ್ರವಾರ ಕತ್ತರಿಸಿದ್ದಾರೆ. ಮಧ್ಯರಾತ್ರಿ ಹಸುವಿಗೆ ಮೇವು ಹಾಕಿ ಮನೆಯವರು ತೆರಳಿದ್ದಾರೆ. ಬೆಳಗಿನ ಜಾವ ಘಟನೆ ನಡೆದಿದ್ದು, ಹಸುವಿನ ಕೆಚ್ಚಲಿನಿಂದ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿ ಮನೆಯವರು ಪಶು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ವೈದ್ಯರು ಹಸುವಿಗೆ ಚಿಕಿತ್ಸೆ ನೀಡಿದ್ದು, ಆರೋಗ್ಯ ಸುಧಾರಿಸಿದೆ. ಕುಳಗೇರಿ ಉಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.