ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

Date:

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಬೆಂಗಳೂರು: ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟದಲ್ಲಿ ಸ್ವಲ್ಪ ಸುಧಾರಣೆ ಕಂಡಂತಿದ್ದರೂ, ಇಂದಿನ ಏರ್ ಕ್ವಾಲಿಟಿ ಇಂಡೆಕ್ಸ್ (AQI) ಅಂಕಿಅಂಶಗಳು ನಗರದ ಗಾಳಿಯ ಗುಣಮಟ್ಟ ಮತ್ತೊಮ್ಮೆ ಹದಗೆಟ್ಟಿರುವುದನ್ನು ತೋರಿಸುತ್ತಿವೆ. ವಾಹನಗಳ ಹೊಗೆ, ಧೂಳು ಹಾಗೂ ನಿರಂತರ ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಸ್ಪಷ್ಟವಾಗಿದೆ.

ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಹೊಂದಿರುವವರಿಗೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಇಂದಿನ ದಿನ ಬೆಂಗಳೂರಿನ ಏರ್ ಕ್ವಾಲಿಟಿ ಇಂಡೆಕ್ಸ್ 170 ಆಗಿದ್ದು, ಡಿಸೆಂಬರ್ ತಿಂಗಳಿಗೆ ಹೋಲಿಸಿದರೆ ಸ್ವಲ್ಪ ಸುಧಾರಣೆ ಕಂಡರೂ, ಗಾಳಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಇದೆ.

ಕಳೆದ ತಿಂಗಳಲ್ಲಿ ಒಮ್ಮೆ AQI 200ರ ಗಡಿ ದಾಟಿದ್ದರಿಂದ ನಗರವಾಸಿಗಳಲ್ಲಿ ಆತಂಕ ಉಂಟಾಗಿತ್ತು. ಸಿಲ್ಕ್ ಬೋರ್ಡ್, ವೈಟ್‌ಫೀಲ್ಡ್ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಹದಗೆಟ್ಟಿತ್ತು. ಇತ್ತೀಚೆಗೆ ವಾತಾವರಣ ಸ್ವಲ್ಪ ಸುಧಾರಿಸಿದರೂ, ಪರಿಸ್ಥಿತಿ ತೃಪ್ತಿಕರ ಮಟ್ಟಕ್ಕೆ ಬಂದಿಲ್ಲ. ಇದೇ ಸ್ಥಿತಿ ಮುಂದುವರೆದರೆ, ಬೆಂಗಳೂರಿನ ಪರಿಸ್ಥಿತಿ ದೆಹಲಿಯಂತಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ PM2.5 ಪ್ರಮಾಣ 82 ಮತ್ತು PM10 ಪ್ರಮಾಣ 108 ದಾಖಲಾಗಿದೆ. PM10 ಎನ್ನುವುದು ಮಾನವನ ಕೂದಲಿಗಿಂತ ಸುಮಾರು 7 ಪಟ್ಟು ತೆಳುವಾದ ಧೂಳಿನ ಕಣಗಳಾಗಿದ್ದು, PM2.5 ಅತ್ಯಂತ ಸೂಕ್ಷ್ಮ ಕಣಗಳಾಗಿವೆ. ಇವು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶ ಪ್ರವೇಶಿಸಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಹಾಗೂ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ.

ರಾಜ್ಯದ ಪ್ರಮುಖ ನಗರಗಳ ಇಂದಿನ ವಾಯು ಗುಣಮಟ್ಟ (AQI)

ಬೆಂಗಳೂರು – 170

ಮಂಗಳೂರು – 167

ಮೈಸೂರು – 89

ಬೆಳಗಾವಿ – 128

ಕಲಬುರ್ಗಿ – 68

ಶಿವಮೊಗ್ಗ – 138

ಬಳ್ಳಾರಿ – 168

ಹುಬ್ಬಳ್ಳಿ – 93

ಉಡುಪಿ – 162

ವಿಜಯಪುರ – 69

ಗಾಳಿ ಗುಣಮಟ್ಟದ ವರ್ಗೀಕರಣ

ಉತ್ತಮ: 0 – 50

ಮಧ್ಯಮ: 50 – 100

ಕಳಪೆ: 100 – 150

ಅನಾರೋಗ್ಯಕರ: 150 – 200

ಗಂಭೀರ: 200 – 300

ಅಪಾಯಕಾರಿ: 300 – 500+

Share post:

Subscribe

spot_imgspot_img

Popular

More like this
Related

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...