No menu items!
20.3 C
Munich
Friday, August 21, 2026

ಮತ ಚಲಾವಣೆ ಮಾಡಿದ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು

Must read

ಹಾಸನ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಅಂತೆಯೇ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಕೂಡ ತಮ್ಮ ಪತ್ನಿಯ ಜೊತೆ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 251 ರಲ್ಲಿ ದಂಪತಿ ಮತದಾನ ಮಾಡಿದ್ದಾರೆ.
ಇದಕ್ಕೂ ಮುನ್ನ ಹೊಳೆನರಸೀಪುರ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯ, ಹರದನಹಳ್ಳಿಯ ದೇವೇಶ್ವರ ದೇವಾಲಯ ಹಾಗೂ ಮಾವಿನಕೆರೆಯ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ದೇವೇಗೌಡರು ಪೂಜೆ ಸಲ್ಲಿಸಿದರು. ಮತದಾನಕ್ಕೆ ಆಗಮಿಸಿದ ವೇಳೆ ಕೂಡ ಪಡುವಲಹಿಪ್ಪೆ ಗ್ರಾಮದ ಕೋದಂಡರಾಮ ದೇವಾಲಯದಲ್ಲೂ ಪೂಜೆ ಸಲ್ಲಿಸಿದ್ದಾರೆ.

- Advertisement -spot_img

More articles

- Advertisement -spot_img

Latest article