ಮದುವೆಯಾಗದ ಪುರುಷ-ಮಹಿಳಾ ಜೋಡಿಗೆ ಇನ್ಮುಂದೆ OYO ರೂಂಗೆ ಪ್ರವೇಶವಿಲ್ಲ!
ಸಾಮಾನ್ಯ ಹೋಟೆಲ್‌ಗೆ ಹೋಗಿ ಬುಕ್ ಮಾಡಿದರೆ ಅಧಿಕ ಹಣ ಆಗಬಹುದು ಎಂಬ ಕಾರಣದಿಂದಾಗಿ. ಜನರು ಆನ್‌ಲೈನ್‌ನಲ್ಲಿ ಸಿಗುವ ಓಯೋ ಮೂಲಕ ಹೋಟೆಲ್ ಅನ್ನು ಬುಕ್ ಮಾಡಿಕೊಂಡಿದ್ದಾರೆ. ಸದ್ಯ ಓಯೋ ರೂಮ್ ಗಳು ಲವರ್ಸ್ ರೂಮ್‌ಗಳಾಗಿ ಬದಲಾಗಿವೆ ಎಂದೇ ಹೇಳಬಹುದು. ಓಯೋ ಕೊಠಡಿಗಳ ಬಗ್ಗೆ ಸಮಾಜಕ್ಕೆ ಯಾವ ರೀತಿಯ ಭಾವನೆ ಇದೆ ಎಂಬುದು ಎಲ್ಲರಿಗೂ ತಿಳಿದಿದೆ.
ಆದ್ರೆ ಇದೀಗ ಇನ್ನು ಮುಂದೆ ಅವಿವಾಹಿತ ಜೋಡಿಗಳಿಗೆ ತನ್ನ ಹೋಟೆಲ್ ರೂಮ್ಗಳನ್ನು ಬಾಡಿಗೆ ನೀಡುವುದಿಲ್ಲ ಎಂದು ಟ್ರಾವೆಲ್ ಬುಕಿಂಗ್ ಕಂಪನಿ ಓಯೋ ಪ್ರಕಟಿಸಿದೆ. ತನ್ನ ಪಾಲುದಾರ ಹೋಟೆಲ್‌ಗಳಿಗಾಗಿ ಹೊಸ ಚೆಕ್ ಇನ್ ಮಾರ್ಗಸೂಚಿಗಳನ್ನು ಹೊರಡಿಸಿರುವ ಓಯೋ, ಮೊದಲಿಗೆ ಮೀರತ್ನಿಂದ ಇವುಗಳನ್ನು ಜಾರಿಗೊಳಿಸಲು ಆರಂಭಿಸಿದೆ.
ಪರಿಷ್ಕೃತ ನೀತಿಯ ಅಡಿಯಲ್ಲಿ, ಪುರುಷ ಮತ್ತು ಮತ್ತು ಮಹಿಳಾ ಜೋಡಿಗಳು ಆನ್ಲೈನ್ ಬುಕಿಂಗ್ ಮಾಡುವಾಗ ಅಥವಾ ಚೆಕ್ ಇನ್ ಮಾಡುವಾಗ ಅವರು ತಮ್ಮ ಮಧ್ಯದ ಸಂಬಂಧವನ್ನು ತೋರಿಸುವ ಪುರಾವೆಗಳನ್ನು ನೀಡುವುದು ಕಡ್ಡಾಯವಾಗಲಿದೆ. ಸ್ಥಳೀಯ ಸಾಮಾಜಿಕ ಪರಿಸ್ಥಿತಿಗಳನ್ನು ನೋಡಿಕೊಂಡು ಪಾಲುದಾರ ಹೋಟೆಲ್ಗಳು ಸಂಗಾತಿಗಳಿಗೆ ರೂಮ್ ನೀಡುವ ಅಥವಾ ನೀಡದಿರುವ ಬಗ್ಗೆ ವಿವೇಚನೆಯಿಂದ ನಿರ್ಧರಿಸಬಹುದು ಎಂದು ಕಂಪನಿ ತಿಳಿಸಿದೆ.
ಹೊಸ ನಿಯಮಗಳನ್ನು ತಕ್ಷಣದಿಂದ ಜಾರಿಗೆ ತರುವಂತೆ ಓಯೋ ಮೀರತ್‌ನಲ್ಲಿರುವ ತನ್ನ ಪಾಲುದಾರ ಹೋಟೆಲ್ಗಳಿಗೆ ನಿರ್ದೇಶನ ನೀಡಿದೆ. ವಾಸ್ತವ ಸ್ಥಿತಿಗತಿಗಳ ಆಧಾರದ ಮೇಲೆ ಕಂಪನಿಯು ಇದನ್ನು ಮತ್ತಷ್ಟು ನಗರಗಳಿಗೆ ವಿಸ್ತರಿಸಬಹುದು ಎಂದು ಮೂಲಗಳು ತಿಳಿಸಿವೆ.