ಮದುವೆಯಾದ 3 ದಿನಕ್ಕೆ ಹೃದಯಾಘಾತದಿಂದ ನವವಿವಾಹಿತ ಸಾವು
ಮಂಡ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಮೂರು ದಿನದ ಹಿಂದೆಯಷ್ಟೆ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಶಶಾಂಕ್(28), ಮೃತ ವರನಾಗಿದ್ದು, ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರನಾಗಿದ್ದ ಶಶಾಂಕ್ಕಳೆದ ಭಾನುವಾರ ಜಾರ್ಖಂಡ್ ಮೂಲದ ಯುವತಿಯನ್ನ ಪ್ರೀತಿಸಿ ಮದುವೆಯಾಗಿದ್ದ. ಇಂದು ಕೆ.ಆರ್.ಪೇಟೆಯಲ್ಲಿ ಶಶಾಂಕ್ನ ಅಂತ್ಯಸಂಸ್ಕಾರ ನಡೆಯಲಿದೆ. ಮಗನ ಮದುವೆ ಸಂಭ್ರಮದಲ್ಲಿದ್ದ ಪೋಷಕರು ಕಂಗಾಲಾಗಿದ್ದಾರೆ.