No menu items!
19.6 C
Munich
Friday, May 1, 2026

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

Must read

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು: ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ಗ್ರಾಮಸ್ಥರು ಹಾಗೂ ರೈತರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ ಮಾಡಿದರು.
ನಗರಸಭೆ ಸೇರ್ಪಡೆ ಕೈಬಿಡಬೇಕು. ಈ ಹೋರಾಟಕ್ಕೆ ನಮ್ಮ ಬೆಂಬಲವಿದೆ. ನಾವು ಗ್ರಾಮಸ್ಥರ ಜೊತೆ ಇರುತ್ತೇವೆ. ಜಯ ಸಿಕ್ಕುವವರೆಗೆ ಹೋರಾಟ ಮಾಡುತ್ತೇವೆ. ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ರೈತರರನ್ನು ಒಕ್ಕಲೆಬ್ಬಿಸುವುದನ್ನ ಬಿಟ್ಟು ರೈತರ ಅಭಿವೃದ್ಧಿ ಮಾಡಬೇಕು, ಹಳ್ಳಿಯ ಸೊಗಡನ್ನು ಉಳಿಸಬೇಕು, ವಾಸ್ತವ ಅಂಶಗಳನ್ನು ಅರಿತು ಕೆಲಸ ಮಾಡಬೇಕು. ಈ ವಿಷಯವನ್ನು ಅಧಿವೇಶನದಲ್ಲಿ ಚರ್ಚೆ ಮಾಡಿ ಈ ಪ್ರತಿಭಟನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕೆಂದು ಮೈತ್ರಿ ಪಕ್ಷದ ಜತೆ ಮಾತನಾಡಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.
ಈ ವಿಷಯವನ್ನು ಕೇಂದ್ರ ಸಚಿವರಾದ ಕುಮಾರಣ್ಣ ಅವರೊಂದಿಗೆ ಗಂಭೀರವಾಗಿ ಚರ್ಚಿಸುತ್ತೇನೆ. ಈ ಹೋರಾಟವನ್ನ ಅರ್ಧ ದಾರಿಯಲಿ ಬಿಟ್ಟು ಹೋಗುವ ಕೆಲಸ ಮಾಡುವುದಿಲ್ಲ, ಯಾವ ರೀತಿ ಪರಿಹಾರ ಮಾಡಬೇಕು ಎಂಬುದನ್ನು ಚರ್ಚಿಸಿ, ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಗ್ರಾಮಸ್ಥರಿಗೆ ಧೈರ್ಯ ಹೇಳಿದರು.

- Advertisement -spot_img

More articles

- Advertisement -spot_img

Latest article