ಮದ್ಯಪ್ರಿಯರಿಗೆ ಮತ್ತೆ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ..!

Date:

 

ಬೆಂಗಳೂರು: ಗ್ಯಾರಂಟಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕಳೆದ ಒಂದು ವರ್ಷದ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಫೆಬ್ರವರಿಯಲ್ಲಿ ಮೊದಲ ಶಾಕ್ ನೀಡಿತ್ತು, ಈಗ ಬಿಯರ್ ಕಂಪನಿಗಳು ಮದ್ಯ ಪ್ರಿಯರಿಗೆ ಮತ್ತೊಂದು ಶಾಕ್ ನೀಡಿವೆ..
ಕೆಲವು ದಿನಗಳ ಹಿಂದೆಯಷ್ಟೇ ಇಂಧನದ ಬೆಲೆ ಲೀಟರ್ ಒಂದಕ್ಕೆ ಮೂರು ರೂಪಾಯಿ ಜಾಸ್ತಿಯಾಗಿತ್ತು. ಇದಾದ ನಂತರ, ಹಾಲಿನ ಪ್ರಮಾಣವನ್ನು ಹೆಚ್ಚಿಸಿ ಬೆಲೆಯನ್ನು ಜಾಸ್ತಿ ಮಾಡಲಾಗಿತ್ತು. ಈಗ, ಮದ್ಯದ ಬೆಲೆ. ಎಲ್ಲಾ ಬ್ರಾಂಡ್ ಗಳ ಬಿಯರ್ ಬೆಲೆ ಜಾಸ್ತಿಯಾಗಿದೆ. ಒಂದು ತಿಂಗಳ ಹಿಂದೆಯಷ್ಟೇ ಬಿಯರ್ ಬೆಲೆಯನ್ನು ಏರಿಕೆಯಾಗಿತ್ತು, ಈಗ ಮತ್ತೆ ಬಿಯರ್ ಪ್ರಿಯರಿಗೆ ಬಿಸಿತಟ್ಟಿದೆ. ಕೆಲವೊಂದು ಬ್ರ್ಯಾಂಡ್ ಗಳ ಬೆಲೆ ಕಮ್ಮಿಯಾಗಬಹುದು ಎನ್ನುವ ನಿರೀಕ್ಷೆಯಲ್ಲಿದ್ದವರಿಗೆ ಬೆಲೆ ಏರಿಕೆ ಶಾಕ್ ನೀಡಿದೆ.
ಬಿಯರ್ ಬೆಲೆ ಬಾಟಲ್ ವೊಂದಕ್ಕೆ ಆಯಾಯ ಬ್ರ್ಯಾಂಡ್ ಆಧರಿಸಿ ಐದರಿಂದ ಇಪ್ಪತ್ತು ರೂಪಾಯಿವರೆಗೆ ಏರಿಕೆಯಾಗಿದೆ. ಕೆಲವೊಂದು ಕಡೆ, ಕಳೆದ ವಾರದಿಂದಲೇ ಪರಿಷ್ಕೃತ ದರವನ್ನು ಗ್ರಾಹಕರಿಂದ ತೆಗೆದುಕೊಳ್ಳಲಾಗಿದೆ. ಹೊಸ ದರ ಇಂದಿನಿಂದಲೇ ಜಾರಿಗೆ ಬರಬಹುದು.

Share post:

Subscribe

spot_imgspot_img

Popular

More like this
Related

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ: ನಟ ಅನಂತನಾಗ್‌ ಭಾವುಕ

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ ಎಂದು ನಟ ಅನಂತನಾಗ್‌ ಭಾವುಕರಾದರು. ನವರಾತ್ರಿಯ...

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...