ಮದ್ಯ ಪ್ರಿಯರಿಗೆ ಮತ್ತೆ ಶಾಕ್ ಕೊಡಲು ಮುಂದಾದ ಸರ್ಕಾರ!

Date:

ಮದ್ಯ ಪ್ರಿಯರಿಗೆ ಮತ್ತೆ ಶಾಕ್ ಕೊಡಲು ಮುಂದಾದ ಸರ್ಕಾರ!

ಬೆಂಗಳೂರು: ಬಿಯರ್‌ಗಳಿಗೆ ತನ್ನದೇ ಆದ ಮದ್ಯ ಪ್ರಿಯರ ಬಳಗವನ್ನು ಹೊಂದಿದೆ. ಯುವ ಜನತೆ ಹೆಚ್ಚಾಗಿ ಹಾಟ್‌ ಡ್ರಿಂಕ್ಸ್‌ಗಿಂತ ಬಿಯರ್‌ಗಳನ್ನೇ ಇಷ್ಟಪಡುತ್ತಾರೆ. ಆದರಲ್ಲಿಯೂ ಕಿಂಗ್ ಫಿಶರ್ ಬಿಯರ್ ಗಳ ಕ್ರೇಜ್ ಬೇರೆಯದೇ ಎನ್ನಬಹುದು. ಆದರೆ ಬಿಯರ್‌ ಲವ್ವರ್ಸ್‌ಗೆ ಇದು ಬ್ಯಾಡ್ ನ್ಯೂಸ್ ಬಂದಿದೆ.
ಹೌದು ಬಿಯರ್ ಮೇಲಿನ ಅಬಕಾರಿ ಸುಂಕವನ್ನ 195% ನಿಂದ 205% ಹೆಚ್ಚಿಸುವ ಬಗ್ಗೆ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಇದಕ್ಕೆ ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ.
ಬ್ರಾಂಡಿ, ವಿಸ್ಕಿ, ರಮ್, ಜಿನ್‍ಗಳ ದರವನ್ನ ಪ್ರತಿ ಕ್ವಾಟರ್‍ಗೆ 10 ರೂ.ನಿಂದ 15 ರೂ. ವರೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಅಲ್ಲದೇ ಬಿಯರ್ ದರವನ್ನ 10 ರೂ. ನಿಂದ 20 ರೂ. ವರೆಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಆಲ್ಕೋಹಾಲ್ ಹೆಚ್ಚಿರುವ ಬ್ರ್ಯಾಂಡ್‍ಗಳ ಬಿಯರ್ ಬೆಲೆ ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ.
ಇನ್ನೂ ಹೈ ಎಂಡ್ ಅಥವಾ ಪ್ರೀಮಿಯಂ ಮದ್ಯಗಳ ದರಗಳಲ್ಲಿ ಏರಿಕೆ ಇರುವುದಿಲ್ಲ. ರಾಜ್ಯ ಸರ್ಕಾರದಿಂದ ಎರಡು ವರ್ಷಗಳಲ್ಲಿ ಮೂರನೇ ಬಾರಿಗೆ ಮದ್ಯದ ದರ ಏರಿಕೆಗೆ ತೀರ್ಮಾನಿಸಲಾಗಿದೆ. 40 ಸಾವಿರ ಕೋಟಿ ರೂ. ಆದಾಯದ ಗುರಿ ಮುಟ್ಟಲು ಎಣ್ಣೆ ಪ್ರಿಯರಿಗೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...