ಮದ್ಯ ಹಗರಣ: ಅರವಿಂದ್ ಕೇಜ್ರಿವಾಲ್ʼಗೆ 15 ದಿನ ನ್ಯಾಯಾಂಗ ಬಂಧನ

Date:

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ʼಗೆ 15 ದಿನ ನ್ಯಾಯಾಂಗ ಬಂಧನ ಕೋರ್ಟ್‌ ವಿಧಿಸಿದೆ. ಹೌದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಇಡಿ ಇಂದು ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ಗೆ ಹಾಜರು ಪಡಿಸಿತು. ಅರ್ಜಿ ವಿಚಾರಣೆ ವೇಳೆ ಇಡಿ ನಮಗೆ ಮುಂದಿನ ವಿಚಾರಣೆ ನಡೆಸುವವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಎಂದು ಮನವಿ ಮಾಡಿತು.
ನಾವು ಹೆಚ್ಚಿನ ರಿಮಾಂಡ್ ಕೇಳುತ್ತಿಲ್ಲ. ಸೆಂಥಿಲ್ ಬಾಲಾಜಿ ಪ್ರಕರಣದಲ್ಲಿ ಸುಪ್ರೀಂ ತೀರ್ಪಿನ ಪ್ರಕಾರ ಹೆಚ್ಚಿನ ಕಸ್ಟಡಿ ಕೇಳುವ ಹಕ್ಕಿಗೆ ಒಳಪಟ್ಟು ನಾವು ನ್ಯಾಯಾಂಗ ಬಂಧನವನ್ನು ಕೇಳುತ್ತಿದ್ದೇವೆ ಎಂದು ಇಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಮನವಿ ಮಾಡಿದರು.
ಇಡಿ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ ಕೇಜ್ರಿವಾಲ್‌ಗೆ ಏಪ್ರಿಲ್‌ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿತು. ಕಳೆದ ಗುರುವಾರ ಕೋರ್ಟ್‌ ಅರವಿಂದ ಕೇಜ್ರಿವಾಲ್‌ ಅವರನ್ನು 4 ದಿನ ಇಡಿ ಕಸ್ಟಡಿಗೆ ನೀಡಿತ್ತು. ಸದ್ಯ ಇಡಿ ಕಸ್ಟಡಿಯಲ್ಲಿ ಇರುವ ಕೇಜ್ರಿವಾಲ್‌ ಇನ್ನು ಮುಂದೆ ತಿಹಾರ್‌ ಜೈಲಿಗೆ ಶಿಫ್ಟ್‌ ಆಗಲಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...